ಫೆ.11 ರಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾರ್ಯಗಾರ : ಸತೀಶ್ ನಾಯ್ಕ
District Guarantee Scheme Implementation Committee Workshop on Feb. 11: Satish Naik
ಲೋಕದರ್ಶನ ವರದಿ
ಫೆ.11 ರಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾರ್ಯಗಾರ : ಸತೀಶ್ ನಾಯ್ಕ
ಕಾರವಾರ 3: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಪ್ರತಿ ಕುಟುಂಬದಲ್ಲೂ ಸುಧಾರಣೆಗಳನ್ನು ತಂದಿದ್ದು, ಈ ಯೋಜನೆಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿದ್ದು, ಈ ಸಂಭ್ರಮದ ಬಗ್ಗೆ ಫೆಬ್ರವರಿ 11 ರಂದು ಹೊನ್ನಾವರದ ಗುಣವಂತೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ಪಾಂಡುರಂಗ ನಾಯ್ಕ ತಿಳಿಸಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಮಟ್ಟದ ಕಾರ್ಯಾಗಾರ ಆಯೋಜನೆ ಕುರಿತ ಸಭೆ ಮತ್ತು ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಫೆಬ್ರವರಿ 11 ರಂದು ನಡೆಯುವ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಭಾಗವಹಿಸಲಿದ್ದು, ಕಾರ್ಯಾಗಾರದಲ್ಲಿ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಎಲ್ಲಾ ತಾಲೂಕಿನ ಫಲಾನುಭವಿಗಳು ಈ ಯೋಜನೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ ಎಂದರು. ಗೃಹಲಕ್ಷ್ಮೀ ಯೋಜನೆಯಿಂದ ಜಿಲ್ಲೆಯ ಮಹಿಳೆಯರು ಸ್ವಾವಲಂಬಿಗಳಾಗಿದ್ದು, ಶಕ್ತಿ ಯೋಜನೆಯು ಈ ಸ್ವಾವಲಂಬನೆಗೆ ಇನ್ನಷ್ಟು ಪುಷ್ಠಿ ನೀಡಿದೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿನ ಅರ್ಹ ಎಲ್ಲಾ ಕುಟುಂಬಗಳನ್ನು ಸೇರೆ್ಡ ಮಾಡಿ ಶೇ.100 ಸಾಧನೆ ಮಾಡಲಾಗಿದ್ದು, ಯುವನಿಧಿ ಮತ್ತು ಅನ್ನಭಾಗ್ಯ ಯೋಜನೆಗಳು ಸೇರಿದಂತೆ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನ ಮಾಡಿರುವ ಹೆಮ್ಮೆ ಇದೆ ಎಂದರು.
ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಎಲ್ಲಾ ತಾಲೂಕುಗಳಿಂದ ಫಲಾನುಭವಿಗಳು ಆಗಮಿಸಲು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮತ್ತು ಕಾರ್ಯಾಗಾರ ನಡೆಯುವ ಸ್ಥಳದಲ್ಲಿ ಕಡ್ಡಾಯವಾಗಿ ಎಲ್ಲಾ ಬಸ್‌ಗಳಿಗೆ ನಿಲುಗಡೆ ನೀಡುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಂದ ಸೂಚಿಸಿದ ಅವರು, ಆಗಮಿಸುವ ಫಲಾನುಭವಿಗಳಿಗೆ ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಹಾಗೂ ಗ್ಯಾರಂಟಿ ಯೋಜನೆಗಳ ಕುರಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳಡಿಯಲ್ಲಿ ಇದುವರೆಗೆ, ಶಕ್ತಿ ಯೋಜನೆಯಡಿ 17.73 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ರೂ.523.39 ಕೋಟಿ ವೆಚ್ಚವಾಗಿದ್ದು, ಗೃಹಲಕ್ಷ್ಮಿ ಯೋಜನೆಯಡಿ 3,37,155 ಫಲಾನುಭವಿಗಳನ್ನು ನೋಂದಣಿ ಮಾಡಿದ್ದು ರೂ.1493.50 ಕೋಟಿ ಪಾವತಿಸಿದ್ದು, ಗೃಹಜ್ಯೋತಿ ಯೋಜನೆಯಡಿ 3,95,281 ಸ್ಥಾವರಗಳನ್ನು ನೋಂದಣಿ ಮಾಡಿದ್ದು ರೂ.510.98 ಕೋಟಿ ವೆಚ್ಚವಾಗಿದೆ, ಅನ್ನಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ 298.89 ಕೋಟಿ ರೂ ಜಮೆ ಮಾಡಲಾಗಿದ್ದು, ಯುವನಿಧಿ ಯೋಜನೆಯಡಿ 8303 ಮಂದಿಯನ್ನು ನೋಂದಾಯಿಸಿ 17.80 ಕೋಟಿ ರೂ ಪಾವತಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ದೀಲೀಷ್ ಶಶಿ ಮಾತನಾಡಿ, ಕಾರ್ಯಾಗಾರದ ಯಶಸ್ಸಿಗಾಗಿ, ಶಿಷ್ಠಾಚಾರ ಪಾಲನೆ ಮತ್ತು ಆಹ್ವಾನ ಪತ್ರಿಕೆ ಉಸ್ತುವಾರಿ ಸಮಿತಿ, ವೇದಿಕೆ ನಿರ್ಮಾಣ ಹಾಗೂ ಆಸನ ಕಲ್ಪಿಸುವ ಉಸ್ತುವಾರಿ ಸಮಿತಿ, ಆಹಾರ ಮತ್ತು ಕುಡಿಯುವ ನೀರು ಉಸ್ತುವಾರಿ ಸಮಿತಿ, ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯ ಉಸ್ತುವಾರಿ ಸಮಿತಿ, ಬ್ಯಾನರ್ ಪೋಸ್ಟರ್ ಅಳವಡಿಕೆ ಪ್ರಚಾರ ಮತ್ತು ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಹ್ವಾನಿಸುವ ಕುರಿತ ಉಸ್ತುವಾರಿ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ನಿರೂಪಣಾ ಉಸ್ತುವಾರಿ ಸಮಿತಿ, ಸಭಾಂಗಣದ ಅಲಂಕಾರ ಉಸ್ತುವಾರಿ ಸಮಿತಿ, ಮಳಿಗೆಗಳಿಗೆ ಜಾಗ ಕಲ್ಪಿಸುವ ಉಸ್ತುವಾರಿ ಸಮಿತಿ ಗಳನ್ನು ರಚಿಸಲಾಗಿದ್ದು, ಈ ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ನಾಗರಾಜ ಮುರ್ಡೇಶ್ವರ, ಜನಾರ್ಧನ ಕುಪ್ಪ ದೇವಾಡಿಗ, ಪುರುಷೋತ್ತಮ ದೇವಪ್ಪ ನಾಯ್ಕ, ಸದಸ್ಯರಾದ ರಾಜೇಂದ್ರ ರಾಣೆ, ದೇವಿದಾಸ ನಾಗೇಶ ಶಾನಭಾಗ, ಅಣ್ಣಪ್ಪ ಮಹಾಬಲೇಶ್ವರ ನಾಯ್ಕ, ಪಾಂಡುರಂಗ ಕೆ ಗೌಡ, ರಿಯಾಜ್ ಅಹಮದ್ ಬಾಬುಸಾಬ್, ಸುಮಾ ರಾಜು ಉಗ್ರಾಣಕರ, ಅನಿಲ್ ಗೋವಿಂದ ದಂಡಗಲ್, ರಾಜಶೇಖರ ರುದ್ರಗೌಡ ಹಿರೇಮಠ, ರಾಜು ಮಂಜಪ್ಪ ನಾಯ್ಕ, ಅಶೋಕ ಕೃಷ್ಣ ಗೌಡ, ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮತ್ತು ಗ್ಯಾರಂಟಿ ಯೋಜನೆಗಳ ಸಂಬಂಧಿತ ಎಲ್ಲಾ ಇಲಾಖಾಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 