ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಗದಗ ಜುಲೈ 20: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಜುಲೈ 21 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಇಂತಿದೆ:
ಜುಲೈ 21 ರಂದು ಬೆಳಿಗ್ಗೆ 10 ಗಂಟೆಗೆ ಗದಗ ಜಿಲ್ಲಾ ವಕೀಲರ ಸಂಘದ ಸಭಾಂಣದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್, ಬೆಂಗಳೂರು ಹಾಗೂ ಗದಗ ಜಿಲ್ಲಾ ವಕೀಲರ ಸಂಘದ ವತಿಯಿಂದ ಏರಿ್ಡಸಲಾದ ಕಾನೂನು ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ನಗರದ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಶಿವಾನುಭವ ಮಂಟಪದಲ್ಲಿ ಗದಗ ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಂಘ ಗದಗ ( ರಿ) ಇವರ ವತಿಯಿಂದ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 8.30 ಗಂಟೆಗೆ ರಸ್ತೆ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.