ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಗದಗ 11: ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಜನವರಿ 12 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಈ ಕೆಳಗಿನಂತಿದೆ. ಜನವರಿ 12 ರಂದು ಬೆಳಿಗ್ಗೆ 9 ಗಂಟೆಗೆ ಹುಲಕೋಟಿಯ ಸ್ವಾಮಿ ವಿವೇಕಾನಂದ ಪಿಯು ಕಾಲೇಜು ಸಭಾಂಗಣದಲ್ಲಿ ಗುರುಭವನ ಕಟ್ಟಡದ ನೀಲನಕ್ಷೆ ಕುರಿತು ಸಭೆ ಜರಗಿಸುವರು. ನಂತರ ಬೆಳಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಏರಿ್ಡಸಿದ ಸ್ವಾಮಿ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 11 ಗಂಟೆಗೆ ಗದಗ ನಗರದ ಹೆಲ್ತ್ ಕ್ಯಾಂಪ್ ಟ್ರಸ್ಟ್ ಕಾರ್ಯಾಲಯದಲ್ಲಿ ಸೇವಾ ಭಾರತಿ ಟ್ರಸ್ಟ್ ಹೆಲ್ತ್ ಕ್ಯಾಂಪ್ ಬೆಟಿಗೇರಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಸಂಜೆ 5 ಗಂಟೆಗೆ ಬಿಂಕದಕಟ್ಟಿ ಪ್ರಾಥಮಿಕ ಸಹಕಾರಿ ಸಂಘದ ಆವರಣದಲ್ಲಿ ಸಹಕಾರ ರತ್ನ ದಿ. ಶ್ರೀ ಎಂ ವಿ ಮೂಲಿಮನಿ ಅವರ 94ನೇ ಜಯಂತೋತ್ಸವ ಹಾಗೂ ಗದಗ ಪರಿಸರದ ಸಹಕಾರಿಗಳು ಇವರ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರಿ ವರ್ಷಾಚರಣೆ ಪ್ರಯುಕ್ತ ಸಹಕಾರಿ ಸಂಘದ ಹಿರಿಯ ಸಾಧಕರಿಗೆ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ನಂತರ ರಾತ್ರಿ 8 ಗಂಟೆಗೆ ರಸ್ತೆಯ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸುವರು. ಅಲ್ಲಿಂದ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ಕಾರ್ಯಲಯ ಪ್ರಕಟಣೆ ತಿಳಿಸಿದೆ.