ನಾಳೆ ಕೊಪ್ಪಳದಲ್ಲಿ ಜಿಲ್ಲಾ ವಕೀಲರ ದಿನಾಚರಣೆ
District Lawyers' Day celebration in Koppal tomorrow
ಕೊಪ್ಪಳ 04: ವಕೀಲರ ದಿನಾಚರಣೆ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ದಿ,6 ರ ಶನಿವಾರ ದಂದು ಆಯೋಜಿಸಲಾಗಿದೆ. ದಿನಾಚರಣೆಯಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣದ ಕಾಮಗಾರಿಗೆ ಸಹಕಾರ ನೀಡಿರುವ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಮತ್ತಿತರ ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ಕೊಪ್ಪಳ ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷ ಎ.ವಿ.ಕಣವಿ ತಿಳಿಸಿದ್ದಾರೆ. ಈ ಕುರಿತು ಅವರು ಗುರುವಾರ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಡಿ.6 ರಂದು ಸಂಜೆ 6 ಗಂಟೆಗೆ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಆವರಣದಲ್ಲಿ ವಕೀಲರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ವಕೀಲರ ಕ್ರೀಡಾಕೂಟ ವಿಜೇತರಿಗೆ ಬಹುಮಾನ ವಿತರಣೆ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ. ವಕೀಲರ ಪರಿಷತ್ ರಾಜ್ಯಾಧ್ಯಕ್ಷ ವಿ.ಡಿ.ಕಾಮರೆಡ್ಡಿ ಆಗಮಿಸಲಿದ್ದಾರೆ. ದಿನಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಸಂಸದರು, ಶಾಸಕರು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳನ್ನು ಅಹ್ವಾನಿಸಲಾಗಿದೆ ಎಂದು ಮಾಹಿತಿ ನೀಡಿದರು. ಗೋಷ್ಟಿಯಲ್ಲಿ ವಕೀಲರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಹಾದಿಮನಿ, ಕೋಶಾಧ್ಯಕ್ಷ ಬಿ.ವಿ.ಸಜ್ಜನ್, ಜಂಟಿ ಕಾರ್ಯದರ್ಶಿ ಸಂತೋಷ ಕವಲೂರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 