ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ: ಗುತ್ತಿಗೆ ಆಧಾರದಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
District Legal Services Authority: Applications invited for various posts on contract basis
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ: ಗುತ್ತಿಗೆ ಆಧಾರದಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಅ.14: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಉಪ ಕಾನೂನು ನೆರವು ಅಭಿರಕ್ಷಕರ ಹುದ್ದೆ 01 ಮತ್ತು ಕಚೇರಿ ಸಹಾಯಕ ಹುದ್ದೆ 01 ಇವುಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಮಾಹೆಯಾನ ಉಪ ಕಾನೂನು ನೆರವು ಅಭಿರಕ್ಷಕರ ಮಾಸಿಕ ವೇತನ ರೂ.45 ಸಾವಿರ ಮತ್ತು ಕಚೇರಿ ಸಹಾಯಕರ ವೇತನ ರೂ.19,695 ಸಂಚಿತ ಸಂಭಾವನೆ ನೀಡಲಾಗುವುದು. ನೇಮಕಾತಿಗಳು ತಾತ್ಕಾಲಿಕವಾಗಿದ್ದು, ಪ್ರಾಧಿಕಾರವು ನೇಮಕಾತಿಯನ್ನು ಯಾವುದೇ ನೋಟೀಸನ್ನು ನೀಡದೇ ರದ್ದುಗೊಳಿಸುವ ಅಧಿಕಾರ ಹೊಂದಿರುತ್ತದೆ. ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಕಚೇರಿಗೆ ಅರ್ಜಿ ಸಲ್ಲಿಸಬೇಕು ಹಾಗೂ ಇತ್ತೀಚಿನ 3 ಪಾಸ್ ಪೋಟೋ ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ತಾಳೂರು ರಸ್ತೆಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೂರನೇ ಮಹಡಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 