ಅ.17 ರಂದು ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿ
District Level Kho-Kho Tournament on A.17
ಅ.17 ರಂದು ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿ
ತಾಳಿಕೋಟಿ 15: ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಮುದ್ದೇಬಿಹಾಳ ಹಾಗೂ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮೈಲೇಶ್ವರ(ತಾಳಿಕೋಟಿ) ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾವಳಿ ನಾಳೆ (ಅ.17)ರಂದು ನಡೆಯಲಿದೆ. ಅಂದು ಬೆಳಿಗ್ಗೆ 8.30 ಘಂಟೆಗೆ ಮೈಲೇಶ್ವರದ ಬ್ರಿಲಿಯಂಟ್ ಶಾಲಾ ಆವರಣದಲ್ಲಿ ನಡೆಯಲಿರುವ ಈ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಪರೀವೀಕ್ಷಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಮುದ್ದೇಬಿಹಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ದೈಹಿಕ ಶಿಕ್ಷಣ ಪರೀವೀಕ್ಷಕರು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ದೈಹಿಕ ಶಿಕ್ಷಣ ಪರೀವೀಕ್ಷಕರು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಎಲ್ಲಾ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ, ಕ್ರೀಡಾಪಟುಗಳು ಹಾಗೂ ತರಬೇತುದಾರರು ಉಪಸ್ಥಿತರಿರುವರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 