ಗದಗ 10: ಗದಗ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಗದಗ ಬೆಟಗೇರಿ ನಗರಸಭೆ , ಇನರ್ ವೀಲ್ ಕ್ಲಬ್ ಹಾಗೂ ವಾಲನೆಟ್ ನಾಲೆಜ್ ಸೊಲ್ಯುಷನ್ ಪ್ರೈ. ಲಿ. ಬೆಂಗಳೂರು ಇವರ ಸಹಯೋಗದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛ ಕ್ವಿಜ್-2018 ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಅವರ ಅಧ್ಯಕ್ಷತೆಯಲ್ಲಿ ಇಂದು ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಬಾಂಗಣದಲ್ಲಿ ಜರುಗಿಸಲಾಯಿತು.
ಮಾನ್ಯ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ನಗರಗಳು ಸಾಕಷ್ಟು ಅಭಿವೃದ್ಧಿ ಹೊಂದಿದ್ದರೂ ಬಯಲು ಮಲವಿಸರ್ಜನೆ ಹಾಗೂ ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿಯು ಮುಂದುವರೆದುಕೊಂಡು ಬಂದಿರುತ್ತದೆ. ಇವುಗಳನ್ನು ಸಂಪೂರ್ಣವಾಗಿ ನಿಮರ್ೂಲನೆ ಮಾಡಬೇಕಿದ್ದಲ್ಲಿ ಸಾರ್ವಜನಿಕರಲ್ಲಿ ಹಾಗೂ ವಿವಿಧ ಭಾಗೀದಾರರಲ್ಲಿ ಈ ಬಗ್ಗೆ ಸಾಕಷ್ಟು ಅರಿವು ಮೂಡಿಸಬೇಕಿರುತ್ತದೆ. ಈ ನಿಟ್ಟಿನಲ್ಲಿ ಸ್ವಚ್ಚತಾ ಜಾಥಾ ಹಾಗೂ ಸ್ವಚ್ಛತಾ ಡ್ರೈವ್ ಗಳನ್ನು ಹಮ್ಮಿಕೊಳ್ಳೂವುದರ ಮೂಲಕ ಸಾರ್ವಜನಿಕರಿಗೆ ಈ ಕುರಿತು ಅರಿವು ಮೂಡಿಸಬೇಕಾಗಿದೆ. ಈ ಸಂದರ್ಭದಲ್ಲಿ ಸ್ವಚ್ಛ ಕ್ವಿಜ್ 2018 ನ್ನು ಏರ್ಪಡಿಸುವುದರ ಮೂಲಕ ಮಕ್ಕಳ ಸಹಭಾಗಿತ್ವದಲ್ಲಿ ಈ ಯೋಜನೆ ಕುರಿತು ತಿಳುವಳಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ರುದ್ರೇಶ ಎಸ್.ಎನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಜಿ. ರುದ್ರಪ್ಪ, ಇನ್ರ್ ವೀಲ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಶಾಂತಾ ಮುಂದಿನಮನಿ, ನಗರ ಸ್ಥಳೀಯ ಸಂಸ್ಥೆಗಳ ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು, ಇನರ್ ವೀಲ್ ಕ್ಲಬ್ ದ ಸದಸ್ಯರುಗಳು, ಹಾಗೂ ಶಾಲಾ ಕಾಲೇಜಿನ ಶಿಕ್ಷಕರು, ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಕ್ವಿಜ್ ದಲ್ಲಿ ವಿಜೇತರಾದ ವಿದ್ಯಾಥರ್ಿಗಳಿಗೆ ನಗದು ಪುರಸ್ಕಾರ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಸದರೀ ರಸ್ ಪ್ರಶ್ನೆ ಕಾರ್ಯಕ್ರಮವನ್ನು ಪೌರಾಡಳಿತ ನಿದರ್ೇಶನಾಲಯದ ಅನುಮೋದಿತ ಏಜನ್ಸಿಯಾದ ವಾಲ್ ನೆಟ್ ನಾಲೆಜ್ ಸೊಲ್ಯುಷನ್ ಪ್ರೈವೇಟ್ ಲಿಮಿಟೆಡ್ ಇವರು ನಡೆಸಿಕೊಟ್ಟರು.