ಬೆಳಗಾವಿ, 02: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಬೆಳಗಾವಿ ನಗರ, ಗ್ರಾಮೀಣ ಇವರುಗಳ ಸಂಯುಕ್ತಾಶ್ರಯದಲ್ಲಿ 2018-19ನೆ ಸಾಲಿನ ಜಿಲ್ಲಾ ಮಟ್ಟದ ಮಕ್ಕಳ ಬೇಸಿಗೆ ಶಿಬಿರವನ್ನು ಜಿಲ್ಲಾ ಬಾಲಭವನದಲ್ಲಿ ಆಚರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕರಾದ ರಾಜೇಂದ್ರ ಬೇಕಲ್ ಅವರು ಎಲ್ಲ ಅತಿಥಿಗಳನ್ನು ಸ್ವಾಗತಿಸಿದರು.
ಡಾ. ರಾಜೇಂದ್ರ. ಕೆ.ವಿ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಹಾಗೂ ಅಧ್ಯಕ್ಷರು ಜಿಲ್ಲಾ ಬಾಲಭವನ ಸಮಿತಿ ಬೆಳಗಾವಿ ಅವರು ಸಸಿಗೆ ನೀರುಣಿಸುವ ಮೂಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಪರ ಭಾಷಣದಲ್ಲಿ ಗ್ರಾಮೀಣ ಕ್ರೀಡೆಗಳನ್ನು, ಜನಪದ ಕಲೆಯನ್ನು ಪ್ರೋತ್ಸಾಹಿಸಲು ಕರೆ
ನೀಡಿದರು.
ಮಕ್ಕಳಲ್ಲಿ ಸದ್ಭಾವನೆ, ಹಿರಿಯರ ಬಗ್ಗೆ ಕಾಳಜಿ, ಸ್ರೀಯರ ಬಗ್ಗೆ ಗೌರವ, ದೇಶಭಕ್ತಿ, ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸುವುದು, ಇಂತಹ ಗುಣಗಳನ್ನು ಅಳವಡಿಸಿಕೊಳ್ಳಬೇಕು ಅಷ್ಟೇಅಲ್ಲದೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇದಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಭಾರತಿ ಶೆಟ್ಟರ್, ಬೆಳಗಾವಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೇವತಿ ಎಸ್. ಹೊಸಮಠ, ಬೆಳಗಾವಿ ನಗರ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಕಮಲಾ ಎಮ್. ಬಸರಗಿ, ಅವರು ಉಪಸ್ಥಿತರಿದ್ದರು.
ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಿರಿಯ ಸಹಾಯಕ ನಿದರ್ೇಶಕರಾದ ಅರುಣ ಮ. ನೀರಗಟ್ಟಿ ಅವರು ನಿರೂಪಿಸಿ ವಂದಿಸಿದರು.