ಸಿಂದಗಿಯಲ್ಲಿ ಜುಲೈ 21 ಹಾಗೂ 22ರಂದು ಜಿಲ್ಲಾ ಸಾಹಿತ್ಯ ಸಮ್ಮೇಳನ
District Literary Conference to be held in Sindagi on July 21st and 22nd
ಲೋಕದರ್ಶನ ವರದಿ
ಸಿಂದಗಿ 21 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಜುಲೈ 21 ಹಾಗೂ 22ರಂದು ನಗರದ ಸಿಂದಗಿ ಎಚ್.ಜಿ ಪಪೂ ಕಾಲೇಜಿನ ಆವರಣದಲ್ಲಿ ಜರುಗಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು. ಸಿಂದಗಿ ತಾಲೂಕ ಪಂಚಾಯತ ಸಭಾಂಗಣದಲ್ಲಿ ತಾಲೂಕು ಕಸಾಪ ವತಿಯಿಂದ ಹಮ್ಮಿಕೊಂಡ 21ನೆಯ ಜಿಲ್ಲಾ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಾರ್ಚ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳು, ಶಿಕ್ಷಕರು ಜನಗಣತಿ ಕಾರ್ಯ ಹಾಗೂ ಬೇಸಿಗೆಯ ಬಿಸಿಲು ಹೀಗೆ ಮುಂತಾದ ಕಾರಣಗಳಿಂದ ಸಮ್ಮೇಳನವನ್ನು ಮುಂದೂಡಲಾಗಿತ್ತು.
ಸಧ್ಯ ಜುಲೈ ತಿಂಗಳ 21 ಮತ್ತು 22.ರಂದು ಅರ್ಥಪೂರ್ಣವಾಗಿ ಸಮ್ಮೇಳನ ಆಚರಿಸೋಣ. ಎಲ್ಲರೂ ಇದಕ್ಕೆ ಸಹಕರಿಸಬೇಕು ಎಂದರು. ಈ ವೇಳೆ ಕಸಾಪ ತಾಲೂಕ ಘಟಕ ಅಧ್ಯಕ್ಷ ವಾಯ್.ಸಿ.ಮಯೂರ ಮಾತನಾಡಿ, ಈ ಹಿಂದೆ ಅನೇಕ ಪೂರ್ವಭಾವಿ ಸಭೆಗಳನ್ನು ಮಾಡಿದ್ದೇವೆ. ಸಾಹಿತಿಗಳು, ವಿದ್ವಾಂಸರು, ಶಿಕ್ಷಕರು, ಅಧಿಕಾರಿಗಳು, ವೈದ್ಯರು ಕನ್ನಡಪರ ಸಂಘಟನೆಗಳು ಭಾಗವಹಿಸಿ ಸಲಹೆಗಳನ್ನು ನೀಡಬೇಕು. ಒಟ್ಟಿನಲ್ಲಿ ಅಕ್ಷರ ಜಾತ್ರೆಯನ್ನು ತಾಲೂಕಿನ ಕನ್ನಡದ ಮನಸ್ಸುಗಳು ಸೇರಿಕೊಂಡು ಯಶಸ್ವಿಗೊಳಿಸೋಣ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 