ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಜಿಲ್ಲಾ ಶೀಘ್ರ ಮಧ್ಯಸ್ಥಿಕೆ ಕೇಂದ್ರ ಕಾರ್ಯನಿರ್ವಹಣೆ

ಲೋಕದರ್ಶನ ವರದಿ                                                          

ವಿಜಯಪುರ 03:ಜಿಲ್ಲೆಯ ವಿಶೇಷ ಚೇತನ ಮಕ್ಕಳನ್ನು ಸದೃಢಗೊಳಿಸಲು ಹಾಗೂ ಇಂತಹ ಮಕ್ಕಳ ಆರೋಗ್ಯವನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ (ಡಿಇಐಸಿ) ಜಿಲ್ಲಾ ಶೀಘ್ರ ಮಧ್ಯಸ್ಥಿಕೆ ಕೆಂದ್ರ ಕಾರ್ಯನಿರ್ವಹಿಸಲಿದೆ ಎಂದು ಆರೋಗ್ಯ ಖಾತೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಹೇಳಿದರು. 

ಇಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಆರಂಭಿಸಿರುವ ಜಿಲ್ಲಾ ಶೀಘ್ರ ಮಧ್ಯಸ್ಥಿಕೆ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಹೆರಿಗೆ ಕೇಂದ್ರಗಳಿಮದ, ಆರ್.ಬಿ.ಎಸ್.ಕೆ. ತಂಡ ಹಾಗೂ ಎಸ್.ಎನ್.ಸಿ.ಯು ಘಟಕಗಳಿಂದ ಶಿಫಾರಸ್ಸು ಮಾಡಿದ ನವಜಾತ ಶಿಶುಗಳನ್ನು ಡಿಇಐಸಿಯಲ್ಲಿ ಶೀಘ್ರ ಮಧ್ಯಸ್ಥಿಕೆ ವಹಿಸಿ ತಪಾಸಣೆ ಮಾಡಿ ತೊಂದರೆ ಇರುವ ಮಕ್ಕಳಿಗೆ ಚಿಕಿತ್ಸೆ ನೀಡಲಾಗುವುದು. ಹೆಚ್ಚಿನ ಚಿಕಿತ್ಸೆ ಬೇಕಾಗುವ ಮಕ್ಕಳಿಗೆ ಆಯುಷ್ಮಾನ್ ಭಾರತ, ಆರೋಗ್ಯ ಕನರ್ಾಟಕ ಯೋಜನೆಯಡಿಯಲ್ಲಿ ನೋಂದಾಯಿತ ಟೆರಿಟರಿ ಕೇಂದ್ರಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದರು.

ಡಿಇಐಸಿ ಯಲ್ಲಿ ಒಟ್ಟು 38 ಕಾಯಿಲೆಗಳಿಗೆ ತಪಾಸಣೆ ಮಾಡಲಾಗುತ್ತದೆ. ಇದುವರೆಗೂ 1189 ಮಕ್ಕಳನ್ನು ತಪಾಸಣೆ ಮಾಡಲಾಗಿದ್ದು, 166 ನ್ಯೂನ್ಯತೆ ಹೊಂದಿದ ಮಕ್ಕಳನ್ನು ಒಡಂಬಡಿಕೆ ಅನುಸಾರ ಕ್ರಮವಾಗಿ ವಾರಕ್ಕೆ 3 ಬಾರಿ 1 ಬಾರಿ ಹಾಗೂ ತಿಂಗಳಿಗೆ ಒಂದು ಬಾರಿ ಭೇಟಿ ನೀಡುತ್ತಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪ್ಸೆ ಅವರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶರಣಪ್ಪ ಕಟ್ಟಿ, ಡಾ.ಸುರೇಶ ನಾಯಕ, ಡಾ.ಸಂಪತ್ ಗುಣಾರಿ, ಡಾ.ಸುರೇಶ ಹೊಸಮನಿ ಸೇರಿದಂತೆ ವೈದ್ಯಾಧಿಕಾರಿಗಳು, ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.