ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಭೆ
District Road Safety Meeting held under the chairmanship of the District Collector
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಭೆ
ಧಾರವಾಡ 10: ಜಿಲ್ಲಾಧಿಕಾರಿಗಳ ನೂತನ ಸಭಾ ಭವನದಲ್ಲಿ ಜಿಲ್ಲಾಧಿಕಾರಿಗಳ ಅವರ ಅಧ್ಯಕ್ಷತೆಯಲ್ಲಿ ಧಾರವಾಡ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯು ಜರುಗಿತು. ಆಟೋರಿಕ್ಷಾ ನಿಲ್ದಾಣಗಳನ್ನು ಹುಬ್ಬಳ್ಳಿಯ ಗೋಕುಲ ರಸ್ತೆ ಬಸ್ ನಿಲ್ದಾಣ, ಹೊಸೂರು ಬಸ್ ನಿಲ್ದಾಣ, ಎಂ.ಟಿ. ಮಿಲ್ ಹತ್ತಿರ ಹಾಗೂ ಧಾರವಾಡದ ಗ್ರಾಮೀಣ ಬಸ್ ನಿಲ್ದಾಣ, ರೈಲು ನಿಲ್ದಾಣ ಹಾಗೂ ಹೊಸ ಬಸ್ ಸ್ಟ್ಯಾಂಡ್ ಹತ್ತಿರ ನಿರ್ಮಾಣ ಮಾಡುವಂತೆ ಹು.ಧಾ.ಮ.ನ.ಪಾ ಅಧಿಕಾರಿಗಳಿಗೆ ಪ್ರಾಧಿಕಾರದ ವತಿಯಿಂದ ಅನುಮತಿಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನೀಡಿದರು. ಆಟೋರಿಕ್ಷಾ ನಿಲ್ದಾಣ ನಿರ್ಮಾಣಕ್ಕಾಗಿ ಅನುಮತಿಸಿದ ಸ್ಥಳಗಳಲ್ಲಿ ಜಾಗೆಯನ್ನು ಗುರ್ತಿಸುವಂತೆ ಹುಬ್ಬಳ್ಳಿ-ಧಾರವಾಡ ಡಿ.ಸಿ.ಪಿ. ಅವರ ನೇತೃತ್ವದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಹು.ಧಾ.ಮ.ನ.ಪಾ. ಅಧಿಕಾರಿಗಳು ಇವರುಗಳನ್ನೊಳಗೊಂಡ ಉಪ ಸಮಿತಿಯನ್ನು ರಚಿಸಲಾಗಿದ್ದು, ಈ ಕುರಿತು ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದರು. ಹುಬ್ಬಳ್ಳಿ-ಧಾರವಾಡದ ವಿವಿಧ ಆಟೋರಿಕ್ಷಾಗಳ ಸಂಘಗಳವರುಗಳು ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯ ಕುರಿತು ಚರ್ಚಿಸುತ್ತಾ. ಮೀಟರ್ ಅಳವಡಿಕೆ, ದುರಸ್ಥಿ ಹಾಗೂ ಕ್ಯಾಲಿಬ್ರೇಷನ್, ಪರ್ಮಿಟ್ ರದ್ದಾದ ಹಳೇ ಆಟೋರಿಕ್ಷಾಗಳಿಗೆ ರಹದಾರಿ ನೀಡಿಕೆ, ರಹದಾರಿ ನವೀಕರಣ, ದಂಡ ವಿನಾಯಿತಿ ಹಾಗೂ ಆನ್ ಲೈನ್ ???ಪ್ ಮೂಲಕ ವಾಹನಗಳನ್ನು ಅನುಮತಿಯಿಲ್ಲದೇ ಬಾಡಿಗೆಗೆ ನಡೆಸುತ್ತಿರುವುದರ ವಿರುದ್ಧ ಕ್ರಮ ಜರುಗಿಸುವ ಕುರಿತು ಹಾಗೂ ಇತ್ಯಾದಿ ಬೇಡಿಕೆಗಳ ಕುರಿತಂತೆ ಕೂಲಂಕುಷವಾಗಿ ಪರೀಶೀಲಿಸಿ ಮುಂದಿನ ಸಭೆಯೊಳಗಾಗಿ ವರದಿ ನೀಡಲು ಹುಬ್ಬಳ್ಳಿ ಧಾರವಾಡ ಡಿ.ಸಿ.ಪಿ ರವೀಶ್ ನೇತೃತ್ವದಲ್ಲಿ ಆರ್.ಟಿ.ಓ, ಹೆಚ್.ಡಿ.ಎಂ.ಸಿ. ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಹಾಗೂ ಉಪ-ವಿಭಾಗಾಧಿಕಾರಿಗಳು ಅಥವಾ ತಹಶೀಲ್ದಾರರನ್ನೊಳಗೊಂಡ ಉಪ ಸಮಿತಿಯನ್ನು ರಚಿಸಲಾಯಿತು. ಸಮಿತಿಯವರು ವಿವಿಧ ಆಟೋರಿಕ್ಷಾಗಳ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಮೀಟರ್ ದರ ನಿಗದಿ ಕುರಿತು ಅಭಿಪ್ರಾಯ ಸಂಗ್ರಹಿಸಿ ಪಕ್ಕದ ಜಿಲ್ಲೆಗಳಲ್ಲಿ ವಿಧಿಸಲಾಗುತ್ತಿರುವ ದರಗಳೊಂದಿಗೆ ಹೋಲಿಕೆ ಮಾಡಿ ಒಂದು ತಿಂಗಳೊಳಗಾಗಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಎನ್.ಡಬ್ಲೂ.ಕೆ.ಆರ್.ಟಿ.ಸಿ ಹುಬ್ಬಳ್ಳಿ ಅವರು ಅಂಗವಿಕಲ ಪ್ರಯಾಣಿಕರಿಗೆ ನಿಲ್ದಾಣಗಳ ಕುರಿತು ಸೂಕ್ತ ಮಾಹಿತಿಯನ್ನು ನೀಡುವ ಕುರಿತಂತೆ ಬಸ್ಸುಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿಕೊಳ್ಳಲು ಉಚ್ಛನ್ಯಾಯಾಲಯವು ನೀಡಿರುವ ನಿರ್ದೇಶನದಂತೆ ಕ್ರಮ ವಹಿಸಬೇಕು. ತಪ್ಪಿದಲ್ಲಿ ತಮ್ಮನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದರು. ಜಿಲ್ಲೆಯಲ್ಲಿ ಸಂಭವಿಸುವ ರಸ್ತೆ ಅಪಘಾತಗಳ ಸಂಪೂರ್ಣ ವಿವರಗಳನ್ನು ಪ್ರತಿ ಸಭೆಯಲ್ಲೂ ಮಂಡಿಸುವಂತೆ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಕಾರ್ಯದರ್ಶಿಯವರಿಗೆ ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಿದರು. ಜಿಲ್ಲೆಯಲ್ಲಿರುವ ಃಟಚಿಛಿಞ ಖಠಿಠಗಳ ಗುರ್ತಿಸುವಿಕೆಯನ್ನು ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆಯವರು ಗುರ್ತಿಸಬೇಕು ಮತ್ತು ಪದೇ ಪದೇ ರಸ್ತೆ ಅಪಘಾತಗಳಾಗುವ ಸ್ಥಳಗಳನ್ನು ವೈಜ್ಞಾನಿಕವಾಗಿ ಗುರ್ತಿಸಿ, ಅಂತಹ ಸ್ಥಳಗಳನ್ನು ಸರಿಪಡಿಸುವ ಹೊಣೆ ಸಂಬಂಧಪಟ್ಟ ಇಲಾಖೆಗಳಾಗಿದ್ದು, ಇಂತಹ ವಿವರಗಳನ್ನು ಸಂಬಂಧಪಟ್ಟ ಇಲಾಖೆಯವರಿಂದ ವರದಿ ಪಡೆದು ಸಲ್ಲಿಸುವಂತೆ ಸೂಚಿಸಿದರು. ಪೊಲೀಸ್ ಇಲಾಖೆಯವರು ಕಟ್ಟು ನಿಟ್ಟಿನ ಪ್ರವರ್ತನ ಕಾರ್ಯಗಳನ್ನು ಜರುಗಿಸಿ, ಅಪಘಾತಗಳನ್ನು ತಡೆಗಟ್ಟಲು ಕ್ರಮ ವಹಿಸಬೇಕು, ಸಾರಿಗೆ ಇಲಾಖೆಯವರು ರಸ್ತೆ ಅಪಘಾತಗಳ ಕುರಿತು ಸಾರ್ವಜನಿಕರಿಗೆ ಸುರಕ್ಷತಾ ಸಪ್ತಾಹಗಳಂತಹ ಕಾರ್ಯಕ್ರಮಗಳನ್ನು ನಿಯಮಿತವಾಗಿ ಹಮ್ಮಿಕೊಳ್ಳಬೇಕು, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಉಪ-ವಿಭಾಗ, ಹೆಚ್.ಡಿ.ಎಂ.ಸಿ. ಮತ್ತು ಎನ್.ಹೆಚ್.ಎ.ಐ. ಅವರುಗಳು ಲೋಪದೋಷ ಇರುವ ರಸ್ತೆಗಳ ದುರಸ್ಥಿಗಳನ್ನು ಕಾಲಕಾಲಕ್ಕೆ ವಿಳಂಭಿಸದೇ ಸರಿಪಡಿಸಲು ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ರವೀಶ ಸಿ.ಆರ್. ಅವರು ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿಕೊಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಆರ್.ಟಿ.ಓ, ಹೆಚ್.ಡಿ.ಎಂ.ಸಿ., ಪೊಲೀಸ್ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಎನ್.ಡಬ್ಲೂ.ಕೆ.ಆರ್.ಟಿ.ಸಿ., ಬಿ.ಆರ್.ಟಿ.ಎಸ್., ಅಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 