ಗೌರವಾನ್ವಿತ ಕರ್ನಾಟಕದ ರಾಜ್ಯಪಾಲರ ಜಿಲ್ಲಾ ಪ್ರವಾಸ
District Tour of the Honorable Governor of Karnataka
ಲೋಕದರ್ಶನ ವರದಿ
ಗದಗ (ಕರ್ನಾಟಕ ವಾರ್ತೆ) ಜುಲೈ 21: ಗೌರವಾನ್ವಿತ ಕರ್ನಾಟಕದ ರಾಜ್ಯಪಾಲರಾದ ಥಾವರ್ಚಂದ ಗೆಹ್ಲೋಟ್ ಅವರು ಜುಲೈ 23 ರಂದು ಬೆಳಿಗ್ಗೆ 9.15 ಗಂಟೆಗೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಪ್ರಯಾಣಿಸಿ ಬೆಳಿಗ್ಗೆ 10.50 ಗಂಟೆಗೆ ಗದಗ ಜಿಲ್ಲೆಯ ಗಜೇಂದ್ರಗಡದ ಪ್ರವಾಸಿ ಮಂದಿರಕ್ಕೆ ತಲುಪಲಿದ್ದಾರೆ. ನಂತರ ಬೆಳಿಗ್ಗೆ 11.15 ಗಂಟೆಗೆ ಗಜೇಂದ್ರಗಡದ ಟಿ.ಟಿ.ಡಿ. ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿರುವ ಭಗವಾನ್ ಮಹಾವೀರ್ ಜೈನ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಧ್ಯಾಹ್ನ 2 ಗಂಟೆಗೆ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 