ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ District administration celebrates Maharishi Valmiki Jayanti

ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಗದಗ 07: ಶ್ರೀರಾಮನ ಚರಿತ್ರೆಯನ್ನು ಜಗತ್ತಿಗೆ ತೋರಿಸುವ ಪಣತೊಟ್ಟು ಕಾವ್ಯರೂಪದಲ್ಲಿ ರಾಮಾಯಣವನ್ನು ಪರಿಚಯಿಸಿದವರು ಮಹರ್ಷಿ ವಾಲ್ಮೀಕಿ ಅವರು ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರು ಬಣ್ಣಿಸಿದರು. ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಗದಗ-ಬೇಟಗೇರಿ ಇವರುಗಳ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ದಿನಾಚರಣೆ ಸಮಾರಂಭದ ಉದ್ಘಾಟಿಸಿ ಅವರು ಮಾತನಾಡಿದರು.ಮನುಕುಲದ ಒಳಿತಿಗಾಗಿ ಹಲವು ಗ್ರಂಥ ಕಾವ್ಯಗಳು ಹೊರಬಂದಿವೆ ಅವುಗಳಲ್ಲಿ ವಿಶೇಷ ಸ್ಥಾನ ಪಡೆಯಲು ಮನುಷ್ಯನ ಜೀವನ ಉತ್ಸಾಹ ಅಧಿಕಗೊಳಿಸಲು ಸಹಕಾರಿಯಾಗಿದೆ. ಇವುಗಳಲ್ಲಿ ಮೇಲೆ ಸ್ತರದಲ್ಲಿ ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ನಿಂತಿದೆ ಎಂದು ಹೇಳಿದರು. ರಾಮಾಯಣದಲ್ಲಿ ಏಳು ಮಹಾ ಕಂಡಗಳು ಹಾಗೂ 24,000 ಶ್ಲೋಕಗಳನ್ನು ಒಳಗೊಂಡ ಮಹಾಕಾವ್ಯವಾಗಿದೆ. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದ ಹಣಮರಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರ್ ಕಾರ್ಯಕ್ರಮ ನಿರ್ವಹಿಸಿದರು.  

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರಿಗೆ ಸನ್ಮಾನಿಸಲಾಯಿತು. ಹಾಗೂ ನಿವೃತ್ತ ಪ್ರಾಧ್ಯಾಪಕಿ ಶಕುಂತಲಾ ಸಿಂದೂರ ಅವರು ವಾಲ್ಮೀಕಿ ಅವರ ಕುರಿತು ಸಂಗ್ರಹಿಸಿ ರಚಿಸಿದ ಗ್ರಂಥವನ್ನು ಅತಿಥಿಗಳು ಬಿಡುಗಡೆ ಗೊಳಿಸಿದರು.ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅಪರ ಜಿಲ್ಲಾಧಿಕಾರಿ ಡಾಕ್ಟರ್ ದುರ್ಗೇಶ್ ಕೆ ಆರ್ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿಆರ್ ಮುಂಡರಗಿ ಉಪ ವಿಭಾಗಾಧಿಕಾರಿ ಗಂಗಪ್ಪ ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಡಾಕ್ಟರ್ ಬಸವರಾಜ್ ಬಳ್ಳಾರಿ ಸೇರಿದಂತೆ ನಗರಸಭೆಯ ಸದಸ್ಯರು ಸಮಾಜದ ಮುಖಂಡರು ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.