ಜಿಲ್ಲಾಡಳಿತದಿಂದ ಭಗವಾನ್ ಬುದ್ಧ ಜಯಂತಿ ವಿಜೃಂಭಣೆಯಿಂದ ಆಚರಣೆಗೆ ನಿರ್ಧಾರ

ಜಿಲ್ಲಾಡಳಿತದಿಂದ ಭಗವಾನ್ ಬುದ್ಧ ಜಯಂತಿ ವಿಜೃಂಭಣೆಯಿಂದ ಆಚರಣೆಗೆ ನಿರ್ಧಾರ District administration decides to celebrate Lord Buddha Jayanti with grandeur


ವಿಜಯಪುರ 23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಮೇ.1ರಂದು ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಭಗವಾನ್ ಬುದ್ಧ ಅವರ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಜಗತ್ತಿಗೆ ಜ್ಞಾನದ ಬೆಳಕಾಗಿ ಶಾಂತಿ, ಸಮಾನತೆಯ ದಾರಿ ತೋರಿದಂತಹ ಹಾಗೂ ಜಗತ್ತಿಗೆ ಶಾಂತಿ ಬೋಧಿಸಿದ ಬುದ್ಧನ ಆದರ್ಶ-ವಿಚಾರಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಭಗವಾನ್ ಬುದ್ಧ ಅವರ ಜಯಂತಿ ಕಾರ್ಯಕ್ರಮವನ್ನು ಮೇ-1ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಓದ್ರಾಮ ಅವರು ತಿಳಿಸಿದರು.  

ಭಗವಾನ ಬುದ್ಧ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಓರ್ವ ನುರಿತ ಉಪನ್ಯಾಸಕರನ್ನು ಆಹ್ವಾನಿಸಿ, ಉಪನ್ಯಾಸ ಕಾರ್ಯಕ್ರಮ ಏರಿ​‍್ಡಸುವುದು, ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ, ವಿವಿಧ ಗಣ್ಯರಿಗೆ ಆಹ್ವಾನ, ವೇದಿಕೆ ಅಲಂಕಾರ, ವಿವಿಧ ಕಲಾ ತಂಡಗಳೊಂದಿಗೆ ಭಾವಚಿತ್ರ ಮೆರವಣಿಗೆಗೆ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.  

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಅಡಿವೆಪ್ಪ ಸಾಲಗಲ್, ರಾಜಶೇಖರ ಯಡಹಳ್ಳಿ,ಮಹೇಶ ಕ್ಯಾತಣ್ಣವರ, ಸಂತೋಷ ಶಾಹಪೂರ,ಸೋಮನಗೌಡ ಕಲ್ಲೂರ,ರಾಜು ತೊರವಿ,ಲಾಲು ಗುಡಿಮನಿ,ಭೀಮರಾಯ ಜಿಗಜಿಣಗಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು,ವಿವಿಧ ಸಮಾಜದ ಮುಖಂಡರು,ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.