ಜಿಲ್ಲಾಡಳಿತದಿಂದ ಡಾ ಜಗಜೀವನರಾಂ, ಡಾ. ಅಂಬೇಡ್ಕರ ಜಯಂತಿ ಆಚರಣೆಗೆ ನಿರ್ಧಾರ
District administration decides to celebrate the birth anniversaries of Dr. Jagjivan Ram and Dr. Amb
ವಿಜಯಪುರ 24: ಜಿಲ್ಲಾಡಳಿತದ ವತಿಯಿಂದ ಬರುವ ಏಪ್ರಿಲ್ 5ರಂದು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಹಾಗೂ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತ್ಯೋತ್ಸವ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವ ಸಿದ್ಧತಾ ಸಭೆಯ ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಬರುವ ಏಪ್ರಿಲ್ 5 ರಂದು ಡಾ. ಬಾಬು ಜಗಜೀವನರಾಂ ಅವರ 119ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಹತ್ತಿರ ಇರುವ ಡಾ. ಬಾಬು ಜಗಜೀವನರಾಂ ಪ್ರತಿಮೆಗೆ ಮಾಲಾರೆ್ಣ ಮಾಡುವ ಮೂಲಕ ಬೆಳಿಗ್ಗೆ 8ಗಂಟೆಗೆ ವಿವಿಧ ಕಲಾತಂಡಗಳೊಂದಿಗೆ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರದ ಮೆರವಣಿಗೆ ಜರುಗಲಿದೆ. ನಗರದ ವಿವಿಧ ವೃತ್ತಗಳಿಂದ ಸಾಗಿ ಕಂದಗಲ್ಲ ಹನಮಂತರಾಯ ರಂಗಮಂದಿರದಲ್ಲಿ ಜಯಂತಿ ಅಂಗವಾಗಿ ಸಭಾ ಕಾರ್ಯಕ್ರಮ ಆಯೋಜಿಸಲಾಗುವುದು. ಜಯಂತಿ ಕಾರ್ಯಕ್ರಮ ಅಂಗವಾಗಿ ಉಪನ್ಯ್ಯಾಸಕರಿಂದ ಡಾ. ಬಾಬು ಜಗಜೀವನರಾಂ ಅವರ ಜೀವನ ಚರಿತ್ರೆ ಹಾಗೂ ಸಾಧನೆ ಕುರಿತು ಉಪನ್ಯಾಸ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲು ತೀರ್ಮಾನಿಸಲಾಯಿತು.
ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 8 ಗಂಟೆಗೆ ನಗರದ ಬುದ್ಧ ವಿಹಾರದಿಂದ ವಿವಿಧ ಕಲಾ ತಂಡಗಳೊಂದಿಗೆ ಡಾ. ಬಿ.ಆರ್ ಅಂಬೇಡ್ಕರ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದ್ದು, ಕಂದಗಲ್ಲ ಹನಂತರಾಯ ರಂಗ ಮಂದಿರದಲ್ಲಿ ಸಭಾ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಜಯಂತಿ ಕಾರ್ಯಕ್ರಮದಲ್ಲಿ ನುರಿತ ಉಪನ್ಯಾಸಕರೋರ್ವರಿಂದ ಉಪನ್ಯಾಸ ಏರಿ್ಡಸುವುದು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ನಿರ್ಧರಿಸಲಾಯಿತು. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಆಯೋಜಿಸುವಂತೆಯೂ, ಆಯಾ ಜಯಂತಿ ದಿನಗಳಂದು ನಗರದಲ್ಲಿರುವ ವಿವಿಧ ವೃತ್ತಗಳಿಗೆ ದೀಪಾಲಂಕಾರ, ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ಅಲಂಕಾರ,
ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗೆಳನ್ನು ಕೈಗೊಳ್ಳುವಂತೆಯೂ, ಈ ಮಹನೀಯರ ಜಯಂತಿ ಕಾರ್ಯಕ್ರಮಗಳಿಗೆ ಎಲ್ಲ ಇಲಾಖೆಯ ಅಧಿಕಾರಿ,ಸಿಬ್ಬಂದಿಗಳು ಭಾಗವಹಿಸುವಂತೆ ಅವರು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷಣ ನಿಂಬರಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆ, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 