ಜಿಲ್ಲಾ ಉಸ್ತುವಾರಿ ಸಚಿವರಿಂದ ಮಂಕಿ ಯಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆ
District in-charge Minister inaugurates new Indira Canteen in Manki
ಕಾರವಾರ, ಫೆ.1: ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಡಳಿತ ಹಾಗೂ ಮಂಕಿ ಪಟ್ಟಣ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರ ತಾಲೂಕಿನ ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್ ನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಭಾನುವಾರ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಾ ಮುನ್ಸಿಪಾಲಿಟಿ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟಿನ್ ನ್ನು ಪ್ರಾರಂಭಿಸಲಾಗಿದೆ.
ಇದರ ಉದ್ದೇಶ ಬಡವರಿಗೆ, ಹಸಿದವರಿಗೆ ಗುಣ ಮಟ್ಟದ ಶುಚಿ ಮತ್ತು ರುಚಿಯಾದ ಪೌಷ್ಟಿಕ ಆಹಾರವನ್ನು ಕೈಗೆಟುಕುವ ದರದಲ್ಲಿ ಒದಗಿಸುವುದಾಗಿದ್ದು, ಈ ಇಂದಿರಾ ಕ್ಯಾಂಟಿನ್ ನ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರುಈ ಸಂದರ್ಭದಲ್ಲಿ ಹೊನ್ನಾವರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಣ್ಣಪ್ಪ ಮಾಬ್ಲೇಶ್ವರ ನಾಯ್ಕ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ ಅಬ್ಬಾಸ್ ಎಸ್, ಮಂಕಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಕೇಶವ ಚೌಗುಲೆ, ಮಂಕಿ ಪಟ್ಟಣ ಪಂಚಾಯತ ಸದಸ್ಯರು, ಸಿಬ್ಬಂದಿಗಳು, ಸಾರ್ವಜನಿಕರು ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 