ಶಿಕ್ಷಕ ಈಶ್ವರಗೌಡ ಬಮ್ಮನಗೌಡ್ರ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಶಿಕ್ಷಕ ಈಶ್ವರಗೌಡ ಬಮ್ಮನಗೌಡ್ರ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ  District-level Best Teacher Award for teacher Ishwaragouda Bammanagoudra


ಹುಬ್ಬಳ್ಳಿ, ಸೆ. 06: ಹುಬ್ಬಳ್ಳಿ ಗ್ರಾಮೀಣ ವಲಯದ ಉಣಕಲ್ ಕೆಪಿಎಸ್ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈಶ್ವರಗೌಡ ಶಂ. ಬಮ್ಮನಗೌಡ್ರ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.  

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸೆ. 5ರಂದು ಧಾರವಾಡದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.  

ಮೂಲತಃ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಗಾಡಗೋಳಿ ಗ್ರಾಮದವರಾದ ಈಶ್ವರಗೌಡ ಬಮ್ಮನಗೌಡ್ರ ಅವರು ಇದುವರೆಗೆ ಬೆಂಗಳೂರು ಹಾಗೂ ಧಾರವಾಡ ಜಿಲ್ಲೆಗಳ ವಿವಿಧ ಶಾಲೆಗಳಲ್ಲಿ ಸುಮಾರು 28 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ನಿಸ್ವಾರ್ಥ ಸೇವೆ ಹಾಗೂ ಕರ್ತವ್ಯನಿಷ್ಠೆಯನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.