ಜು.21ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ

 ಜು.21ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ District level Press Day celebration on July 21st

ಹಾವೇರಿ  20:  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ವತಿಯಿಂದ ಜು.21ರಂದು ಬೆಳಗ್ಗೆ 10.30ಕ್ಕೆ ನಗರದ ಹಾನಗಲ್ ರಸ್ತೆಯಲ್ಲಿರುವ ಶಿವಾ ಕನ್ವೆನ್ಷನ್ ಹಾಲ್ ನಲ್ಲಿ ಹಾವೇರಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. 

ಸಮಾರಂಭದಲ್ಲಿ ಕಳೆದ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಗುವುದು.  

ಜವಳಿ, ಕಬ್ಬು ಅಭಿವೃದ್ದಿ, ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸಮಾರಂಭ ಉದ್ಘಾಟಿಸಲಿದ್ದಾರೆ. ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. 

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಆಶಯ ನುಡಿಗಳನ್ನಾಡಲಿದ್ದಾರೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಕುರುವತ್ತೇರ ಅಧ್ಯಕ್ಷತೆ ವಹಿಸಲಿದ್ದಾರೆ. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನಸಭೆ ಉಪ ಸಭಾಧ್ಯಕ್ಷ ಹಾಗೂ ಶಾಸಕ ರುದ್ರ​‍್ಪ ಲಮಾಣಿ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ, ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಎಫ್‌.ಎನ್ ಗಾಜಿಗೌಡ್ರ, ನಿಕಟಪೂರ್ವ ನಗರಸಭೆ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಸಂಜೀವಕುಮಾರ ನೀರಲಗಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ವಸತಿ ಸಚಿವರ ಮಾಧ್ಯಮ ಸಂಯೋಜಕ ಲಕ್ಷಿ-್ಮ ನಾರಾಯಣ,  

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ನಿಂಗಪ್ಪ ಚಾವಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಎಂ ಸತ್ಯಪ್ಪನವರ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, 

ಜಿಲ್ಲಾ ಪಂಚಾಯಿತಿ ಸಿಇಓ ರುಚಿ ಬಿಂದಾಲ್ ಸೇರಿದಂತೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಹಾಗೂ ತಾಲೂಕು ಸಮಿತಿ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಕುರುವತ್ತೇರ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೀರೇಶ ಮಡ್ಲೂರ ತಿಳಿಸಿದ್ದಾರೆ.