ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆರಸ್ತೆ ಬದಿ ಆಹಾರಗಳಲ್ಲಿ ನಿಷೇಧಿತ ವಸ್ತು, ಕೃತಕ ಬಣ್ಣ ಬಳಸದಂತೆ ಎಚ್ಚರಿಕೆ ವಹಿಸಿ: ಡಾ.ಸುರೇಶ ಬಿ.ಇಟ್ನಾಳ
District level advisory committee meeting of Food Safety and Quality Authority: Be careful not to us
ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆರಸ್ತೆ ಬದಿ ಆಹಾರಗಳಲ್ಲಿ ನಿಷೇಧಿತ ವಸ್ತು, ಕೃತಕ ಬಣ್ಣ ಬಳಸದಂತೆ ಎಚ್ಚರಿಕೆ ವಹಿಸಿ: ಡಾ.ಸುರೇಶ ಬಿ.ಇಟ್ನಾಳ
ಕೊಪ್ಪಳ 03: ರಸ್ತೆ ಬದಿ ದೊರೆಯುವ ಗೋಬಿ ಮಂಚೂರಿ, ಪಾನಿಪೂರಿ ಮುಂತದಾ ಚಾಟ್ಸ್‌ಗಳಲ್ಲಿ ಕೃತಕ ಬಣ್ಣ ಹಾಗೂ ನಿಷೇಧಿತ ವಸ್ತುಗಳನ್ನು ಬೆರೆಸದಂತೆ ಸರ್ಕಾರ ಆದೇಶಿಸಿದೆ. ಅದರಂತೆ ಸರ್ಕಾರದ ಆದೇಶ ಪಾಲನೆಯಾಗುತ್ತಿರುವ ಬಗ್ಗೆ ಇಲಾಖೆ ಎಚ್ಚರಿಕೆ ವಹಿಸಿ, ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರಾದ ಡಾ.ಸುರೇಶ ಬಿ.ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಓಷಧ ಆಡಳಿತ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ಎಲ್ಲ ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ತಯಾರಾಗುವ ಆಹಾರ ಹಾಗೂ ರಸ್ತೆ ಬದಿ ಮಾರಾಟ ಮಾಡುವ ಗೋಬಿ ಮಂಚೂರಿ, ಪಾನಿ ಪೂರಿಯಂತಹ ಚಾಟ್ಸ್, ಫಾಸ್ಟ್ ಫುಡ್‌ಗಳಲ್ಲಿ ಕೃತಕ ಬಣ್ಣಗಳನ್ನು ಹಾಗೂ ಆಹಾರದ ರುಚಿ ಹೆಚ್ಚಿಸುವ ನಿಷೇಧಿತ ವಸ್ತುಗಳನ್ನು ಬಳಸದಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಆದಾಗ್ಯೂ ಕೆಲ ಅಂಗಡಿಗಳಲ್ಲಿ ನಿಷೇಧಿತ ವಸ್ತುಗಳು ಹಾಗೂ ಕೃತಕ ಬಣ್ಣಗಳ ಬಳಕೆ ನಡೆಯುತ್ತಿದೆ. ಇಂತಹ ಹೋಟೆಲ್, ರಸ್ತೆ ಬದಿ ಅಂಗಡಿಗಳನ್ನು ಗುರುತಿಸಿ, ಅದರ ಮಾಲೀಕರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಿ. ರುಚಿ ಹೆಚ್ಚಿಸುವ ನಿಷೇಧಿತ ವಸ್ತುಗಳು ಆರೋಗ್ಯಕ್ಕೆ ತುಂಬಾ ಹಾನಿಕಾರಕ. ಆದ್ದರಿಂದ ಯಾವುದೇ ಹೋಟೆಲ್, ರಸ್ತೆ ಬದಿ ಅಂಗಡಿಗಳಲ್ಲಿ ಇಂತಹ ನಿಷೇಧಿತ ವಸ್ತುಗಳ ಬಳಕೆ ಮಾಡುತ್ತಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಂಡು, ಸರ್ಕಾರದ ಆದೇಶದ ಕಟ್ಟುನಿಟ್ಟಿನ ಪಾಲನೆಗೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯ ಎಲ್ಲ ವಸತಿ ಶಾಲೆಗಳಲ್ಲಿ, ಅಂಗನವಾಡಿಗಳಲ್ಲಿ ಹಾಗೂ ಶಾಲೆಗಳಲ್ಲಿ ನೀಡುವ ಆಹಾರಗಳಲ್ಲಿ ಬಳಸುವ ದಿನಸಿ ವಸ್ತುಗಳ ಗುಣಮಟ್ಟ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕು. ಹಾಗೂ ಆಹಾರ ಸಾಮಗ್ರಿ ಶೇಖರಿಸುವ ಗೋದಾಮುಗಳಲ್ಲಿ ನಿಯಮಾನುಸಾರ ಸ್ವಚ್ಛತೆ ಹಾಗೂ ಸುರಕ್ಷತೆ ನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ಹಾಲು ಸಂಗ್ರಹಣಾ ಕೇಂದ್ರಗಳಿಗೆ ಗುಣಮಟ್ಟ ಪರೀಕ್ಷೆಯ ಮಾನದಂಡಗಳನ್ನು ನೀಡಲಾಗಿದೆ. ಆ ಮಾನದಂಡಗಳನ್ವಯ ಗುಣಮಟ್ಟದ ಹಾಲನ್ನು ಮಾತ್ರ ಹಾಲು ಮಾರಾಟಗಾರರಿಂದ ಸಂಗ್ರಹಿಸಬೇಕು. ಇಂತಹ ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ದೊರೆಯುವ ಹಾಲನ್ನು ಪರೀಕ್ಷೆಗೊಳಪಡಿಸಿ. ಯೂರಿಯಾ ಬಳಸಿ ನಕಲಿ ಹಾಲು ಹಾಗೂ ಹಾಲಿನ ಉತ್ಪನ್ನಗಳಾದ ಪನೀರ್, ಚೀಸ್ ಮುಂತಾದವುಗಳನ್ನು ತಯಾರಿಸಲಾಗುತ್ತದೆ. ಅಂತಹವುಗಳನ್ನು ಗುರುತಿಸಿ ಮಾರಾಟವಾಗದಂತೆ ಎಚ್ಚರಿಕೆ ವಹಿಸಬೇಕು. ಬೇಕರಿ ಹಾಗೂ ಎಗ್‌ರೈಸ್ ಅಂಗಡಿಗಳಲ್ಲಿ ಒಡೆದ ಹಾಗೂ ಕೆಟ್ಟ ಮೊಟ್ಟೆಗಳನ್ನು ಬಳಸುತ್ತಿರುವ ಕುರಿತು ದೂರುಗಳಿವೆ. ಈ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮಾದರಿ ಪರೀಕ್ಷೆ ಮಾಡಿ, ತಪ್ಪು ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿಯೂ ಇಲಾಖೆಯಿಂದ ಮಾದರಿ ಪರೀಕ್ಷೆ ನಡೆಸಬೇಕು. ಸರ್ಕಾರದಿಂದ ಜನರಿಗೆ ನೀಡುವ ಯಾವುದೇ ಆಹಾರ ಸಾಮಗ್ರಿ, ದಿನಸಿ ಮುಂತಾದವು ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಸಾರ್ವಜನಿಕರು ಹೋಟೆಲ್ ಹಾಗೂ ರಸ್ತೆ ಬದಿ ಅಂಗಡಿಗಳಲ್ಲಿ ದೊರೆಯುವ ಆಹಾರ ಸೇವಿಸುವ ಮುನ್ನ ಎಚ್ಚರಿಕೆ ವಹಿಸಬೇಕು. ಗುಣಮಟ್ಟದ ಆಹಾರ ಸೇವನೆಗೆ ಆದ್ಯತೆ ನೀಡಬೇಕು. ಕಿರಾಣಿ ಹಾಗೂ ಮಾರ್ಟ್‌ಗಳಲ್ಲಿ ದೊರೆಯುವ ದಿನಸಿ ಸಾಮಗ್ರಿಗಳ ಮೇಲೆ ಕಡ್ಡಾಯವಾಗಿ ಸುರಕ್ಷಿತ ಬಳಕೆಯ ಅವಧಿಯನ್ನು ನಮೂದಿಸಬೇಕು. ಗ್ರಾಹಕರು ಅವಧಿ ನಮೂದಿಸಿದ ಬಗ್ಗೆ ಖಾತ್ರಿಪಡಿಸಿಕೊಂಡು ಸರಕು ಕೊಳ್ಳಬೇಕು. ಮಕ್ಕಳಿಗೆ ನೀಡುವ ಸಿಹಿತಿಂಡಿ, ಐಸ್‌ಕ್ರೀಮ್ ಮುಂತಾದ ತಿನಿಸುಗಳಲ್ಲಿ ಬಳಸಲಾದ ಅನುಮತಿಸಲಾದ ವಸ್ತುಗಳ ವಿವರಣೆ ನಂತರವೇ ಮಕ್ಕಳಿಗೆ ತಿನಿಸುಗಳನ್ನು ನೀಡಬೇಕು. ಕುರುಕಲು ತಿಂಡಿಗಳಲ್ಲಿ ಬಳಸುವ ಎಣ್ಣೆ ಕಳಪೆಯಾಗಿರುವ ಸಾಧ್ಯತೆ ಇರುತ್ತದೆ. ಆದ್ದರಿಂದ ಅಂತಹ ತಿನಿಸುಗಳ ಬಗ್ಗೆ ಜಾಗ್ರತೆ ವಹಿಸಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ, ಜಾಗೃತಿ ಮೂಡಿಸಬೇಕು ಎಂದು ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಆಹಾರ ಸುರಕ್ಷತೆ ಮತ್ತು ಓಷಧ ಆಡಳಿತ ಇಲಾಖೆಯ ಅಂಕಿತ ಅಧಿಕಾರಿ ಡಾ.ಅಲಕನಂದಾ ಮಳಗಿ ಇಲಾಖೆ ಕೈಗೊಂಡ ಕ್ರಮಗಳು, ಆಹಾರ ಸುರಕ್ಷತಾ ಮಾನದಂಡಗಳು ಕುರಿತು ವಿವರವಾದ ಮಾಹಿತಿ ನೀಡಿದರು.ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಆಹಾರ ಇಲಾಖೆ ಉಪನಿರ್ದೇಶಕ ವಿಶ್ವನಾಥ, ಅಬಕಾರಿ ಇಲಾಖೆ ಡಿವೈಎಸ್‌ಪಿ ಬಿ.ಆಂಜನೇಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 