ಬೆಳಗಾವಿ : ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ನಿಬಂಧ ಸ್ಪರ್ಧೆ

ಲೋಕದರ್ಶನ ವರದಿ

ಬೆಳಗಾವಿ 19:  ದಿ. 17ರಂದು ರಾಷ್ಟ್ರೀಯ ಮತದಾನ ದಿನಾಚರಣೆಯ ಪೂರ್ವ ಭಾವಿಯಾಗಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಉಪನಿದರ್ೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಉಪ ನಿದರ್ೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ/ ಚಿಕ್ಕೋಡಿ ಇವರ ವತಿಯಿಂದ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ನಿಬಂಧ ಸ್ಪಧರ್ೆ, ಕ್ವೀಜ್ ಮತ್ತು ನಾಟಕ  ಸ್ಪಧರ್ೆಗಳನ್ನು ಜಿಲ್ಲಾ ಪಂಚಾಯತ ಬೆಳಗಾವಿ ಕಾರ್ಯಾ ಲಯದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜೇಂದ್ರ. ಕೆ.ವಿ.ರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ಉಪ ನೋಡಲ್ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಜಿಲ್ಲಾ ಸ್ವೀಪ್ ಸಮಿತಿಯ ಇ.ಎಲ್.ಸಿ. ನೋಡಲ್ ಅಧಿಕಾರಿ ಆಯ್.ಡಿ.ಹಿರೇಮಠ, ಉಪ ನಿದರ್ೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳಗಾವಿ/ಚಿಕ್ಕೋಡಿ, ಉಪ ನಿದರ್ೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾನ್ಯ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳು, ಭವಿಷ್ಯದ ಮತದಾರರಾದ ವಿದ್ಯಾಥರ್ಿಗಳು ಯಾವುದೇ ಆಮಿಷಕ್ಕೆ ಒಳಗಾಗದೇ ನೈತಿಕ ಮತದಾನ ಮಾಡಲು ಮತ್ತು ಸಂವಿಧಾನಬದ್ಧವಾಗಿ ಸಿಕ್ಕಿರುವ ಮತದಾನವೆಂಬ ಆಯುಧವನ್ನು ಉಪಯೋಗಿಸಿ ಜಾಗೃತ ಮತದಾರರರಾಗಿ ಮತ ಚಲಾಯಿಸಲು ಹಾಗೂ ನನ್ನ ಮತವನ್ನು ಮಾರಿಕೊಳ್ಳುವುದಿಲ್ಲ ಎಂಬ ದೃಢ ಸಂಕಲ್ಪದೊಂದಿಗೆ ಪವಿತ್ರವಾದ  ಚುನಾವಣಾ ಕಾರ್ಯದಲ್ಲಿ ಭಾಗವಹಿಸುವಂತೆ ಕರೆ ನೀಡಿದರು. 

ಕಾರ್ಯಕ್ರಮವು ಜ್ಯೋತಿ ಮತ್ತು .ಮೇಘಾ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ಸುಜಾತಾ ಬೆನಕಟ್ಟಿ ಇವರ ವಂದನಾರ್ಪನೆಯೊಂದಿಗೆ  ಮುಕ್ತಾಯವಾಯಿತು. ಕಾರ್ಯಕ್ರಮವನ್ನು ನಿರ್ಮಲಾ ನಾಯಕ ಅವರು ನಿರೂಪಿಸಿದರು.