ಲೋಕದರ್ಶನ ವರದಿ
ಕೊಪ್ಪಳ 27: ನಗರದ ರೈಲ್ವೆ ಸ್ಟೇಷನ್ ಹತ್ತಿರ ಇರುವ ಬಾಲಾಜಿ ಫಂಕ್ಷನ್ ಹಾಲ್ನಲ್ಲಿ ದಿ. 28 ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಪ್ರಾಚಾರ್ಯರ ಸಂಘವತಿಯಿಂದ ಪ್ರಥಮ ಜಿಲ್ಲಾ ಮಟ್ಟದ ಪ್ರಪ್ರಥಮ ಶೈಕ್ಷಣಿಕ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಸೋಮನಗೌಡ ಪಾಟೀಲ್ ಹೇಳಿದರು.
ಅವರು ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಥಮವಾಗಿ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮ್ಮೇಳನವನ್ನು ಹಮ್ಮಿಕೊಂಡಿದ್ದು, ಸಮ್ಮೇಳನದ ದಿವ್ಯ ಸಾನಿಧ್ಯವನ್ನು ಜಗದ್ಗುರು ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳವರುವಹಿಸಲಿದ್ದಾರೆ. ಉಪಮುಖ್ಯಮಂತ್ರಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಉದ್ಘಾಟನೆ ಮಾಡುವರು. ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಸಂಸದ ಸಂಗಣ್ಣ ಕರಡಿ ಬಿಡುಗಡೆಗೊಳಿಸುವರು.
ವಿದ್ಯಾರ್ಥಿಗಳಿಗೆ ಪುರಸ್ಕಾರವನ್ನು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪೂರ ಹಾಗೂ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ ಅವರು ನೀಡುವರು. ನಿವೃತ್ತ ನೌಕರರಿಗೆ ಸನ್ಮಾನವನ್ನು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಹಾಗೂ ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರು ಮಾಡುವರು. ಸಮ್ಮೇಳನದ ಅದ್ಯಕ್ಷತೆಯನ್ನು ಎಂ.ಶಂಶುದ್ದೀನ್ ಅವರು ವಹಿಸಿಸುವರು. ಸಮ್ಮೇಳನದಲ್ಲಿ ಕೃತಿ ಲೋಕಾರ್ಪಣೆ, ವಿಶೇಷ ಉಪನ್ಯಾಸ ಹಾಗೂ ಸಂಗೀತ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಉಪನ್ಯಾಸಕರಾದ ಪತ್ರೇಪ್ಪ ಚತರಕಿ, ಹನುಮಂತಪ್ಪ ಅಂಡಗಿ, ಎಸ್.ವಿ.ಮೇಳಿ ಉಪಸ್ಥಿತರಿದ್ದರು.