ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿಯಿಂದ ಜೂನ್ 24 ರಂದು ಜಿಲ್ಲಾ ಮಟ್ಟದ ಸಭೆ

ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿಯಿಂದ ಜೂನ್ 24 ರಂದು ಜಿಲ್ಲಾ ಮಟ್ಟದ ಸಭೆ District level meeting on June 24th by Krishna Kolla Water Conservation Struggle Committee

ವಿಜಯಪುರ 22 : ಜಿಲ್ಲೆಯ "ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ ವಿಜಯಪುರ" ವತಿಯಿಂದ ಜನಹಿತ ಹಾಗೂ ಹೋರಾಟದ ವಿಚಾರಗಳಿಗೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆಯ ಎಲ್ಲ ಸಂಘಟನೆಗಳ ಪ್ರಮುಖರ ಸಭೆಯನ್ನು ದಿನಾಂಕ 24-06-2026 ರಂದು (ಬುಧವಾರ) ಬೆಳಿಗ್ಗೆ 11:00 ಗಂಟೆಗೆ ವಿಜಯಪುರ ನಗರದ ಡಾ. ಬಿ.ಆರ್‌. ಅಂಬೇಡ್ಕರ್ ಭವನದಲ್ಲಿ ಕರೆಯಲಾಗಿದೆ. ಈ ಸಭೆಯಲ್ಲಿ ಸಮಿತಿಯು ಇದುವರೆಗೆ ಕೈಗೊಂಡಿರುವ ವಿವಿಧ ಕಾರ್ಯಚಟುವಟಿಕೆಗಳು, ಹೋರಾಟದ ಹಾದಿಯಲ್ಲಿ ಸಾಧಿಸಿರುವ ಪ್ರಗತಿ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ರೂಪರೇಷೆಗಳ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ.

ಅಲ್ಲದೆ, ರಾಜ್ಯ ಹಾಗೂ ಕೇಂದ್ರ  ಸರ್ಕಾರದ ಮಟ್ಟದಲ್ಲಿ ಬೇಡಿಕೆಗಳನ್ನು ಮಂಡಿಸಲು ನಿಯೋಗ ಕೊಂಡೊಯ್ಯುವ ಬಗ್ಗೆ ಹಾಗೂ ಅದರ ಕಾರ್ಯತಂತ್ರದ ಕುರಿತೂ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ಜಿಲ್ಲೆಯ ಜನರ ಹಿತಾಸಕ್ತಿಗೆ ಸಂಬಂಧಿಸಿದ ಈ ಸಭೆಯಲ್ಲಿ ಎಲ್ಲ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ವಿವಿಧ ಕ್ಷೇತ್ರಗಳ ಪ್ರಮುಖರು ಹಾಗೂ ಹೋರಾಟದಲ್ಲಿ ಆಸಕ್ತಿ ಹೊಂದಿರುವ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡುವ ಮೂಲಕ ಹೋರಾಟವನ್ನು ಮತ್ತಷ್ಟು ಬಲಪಡಿಸಬೇಕೆಂದು ಸಮಿತಿಯು ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ "ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ"ಯ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು.