ಮೊಹರಂ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ

ಮೊಹರಂ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ District level preparatory meeting on the occasion of Muharram festival

ಲೋಕದರ್ಶನ ವರದಿ 

ಧಾರವಾಡ 23:  ಧಾರವಾಡ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ (ಜೂ.22) ಪೊಲೀಸ್ ಅಧೀಕ್ಷಕರಾದ ಗುಂಜನ್ ಆರ್ಯ ಅವರ ಅಧ್ಯಕ್ಷತೆಯಲ್ಲಿ ಜೂನ್ 26 ರಂದು ಜರುಗುವ ಮೊಹರಂ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಂತಿ, ಸೌಹಾರ್ದತೆ ಹಾಗೂ ಸಾಮರಸ್ಯದಿಂದ  ಮೊಹರಂ ಹಬ್ಬವನ್ನು ಆಚರಿಸಲು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ಧರ್ಮದ ಮುಖಂಡರುಗಳು ಸಭೆಯಲ್ಲಿ ಹಾಜರಿದ್ದರು.