ಬೆಳಗಾವಿ: 12: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ. ಎಸ್. ವಸ್ತ್ರದ ಫೆಬ್ರುವರಿ 11 ರಂದು ಬೆಳಗಾವಿ ಜಿಲ್ಲಾ ಪಂಚಾಯತ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯ ಸ್ವೀಪ್ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಮತ್ತು ಇ.ಎಲ್.ಸಿ.ಎಸ್ ಸಂಚಾಲಕರುಗಳೊಂದಿಗೆ ಕಾರ್ಯಚಟುವಟಿಕೆಗಳ ಕುರಿತು ಚಚರ್ಿಸಿ ವರದಿಗಳನ್ನು ಪರಿಶೀಲಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಲೆಕ್ಕಾಧಿಕಾರಿಗಳಾದ ಪರುಶುರಾಮ ದುಡಗುಂಟಿ, ಬೆಳಗಾವಿ ಹಾಗೂ ಜಿಲ್ಲೆಯ ಉಪ ನಿದರ್ೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿದರ್ೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ/ಚಿಕ್ಕೋಡಿ, ವಿಶ್ವವಿದ್ಯಾಲಯದ ಕುಲಸಚಿವರು, ಪದವಿ ಕಾಲೇಜು, ವೈದ್ಯಕೀಯ ಕಾಲೇಜು, ನಸರ್ಿಂಗ್ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಡಿಪ್ಲೋಮಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ಡಾ.ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.