ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾ0ುರ್ಕ್ರಮ

District tour program of the District In-charge Minister

ಲೋಕದರ್ಶನ ವರದಿ 

  

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾ0ುರ್ಕ್ರಮ 

ಗದಗ   17  : ರಾಜ್ಯದ ಕಾನೂನು, ನ್ಯಾ0ು ಮತ್ತು ಮಾನವ ಹಕ್ಕುಗಳು, ಸಂಸದೀ0ು ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಕೆ. ಪಾಟೀಲ ಅವರು ಏಪ್ರಿಲ್ 18 ಮತ್ತು 19 ರಂದು  ಜಿಲ್ಲೆ0ುಲ್ಲಿ ಪ್ರವಾಸ ಕೈಗೊಳ್ಳಲಿದ್ದು  ವಿವರ ಈ ಕೆಳಗಿನಂತಿದೆ. 

ಏಪ್ರಿಲ್ 18 ರಂದು ಬೆಳಿಗ್ಗೆ 6.30 ಗಂಟೆಗೆ  ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹೊರಟು ಗದುಗಿಗೆ ಬೆ. 7.30 ಗಂಟೆಗೆ  ಆಗಮಿಸುವರು.  ಬೆಳಿಗ್ಗೆ 9.30 ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೇಣುಕಾ ನಗರದಲ್ಲಿ ಪ್ರೊ. ಕೀರ್ತಿನಾಥ ಕುರ್ತಕೋಟಿ ಸಾಂಸ್ಕೃತಿಕ ಭವನದ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 10.30 ಗಂಟೆಗೆ ಕುರ್ತಕೋಟಿಯಲ್ಲಿ ಗದಗ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು. ಸಂಜೆ 5.30 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಜಿಲ್ಲಾಧಿಕಾರಿಗಳು, ಸಿ.ಇ.ಓ ಮತ್ತು ಡಿ.ಡಿ.ಪಿ.ಐ ಗದಗ ರವರುಗಳೊಂದಿಗೆ ಶಾಲಾ ಶೌಚಾಲಯದ ಕುರಿತು ಸಭೆ ಜರುಗಿಸುವರು. ಮತ್ತು ವಾಸ್ತವ್ಯ ಮಾಡುವರು.   

ಏಪ್ರಿಲ್ 19 ರಂದು ಬೆಳಿಗ್ಗೆ 10 ಗಂಟೆಯಿಂದ 11 ರವರೆಗೆ ಮುಳಗುಂದ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 11 ಗಂಟೆಗೆ ಮುಳಗುಂದದಲ್ಲಿ  ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.