ಬಂದ್ ಮಾಡಿ ಜನಸಾಮಾನ್ಯರಿಗೆ ತೊಂದರೆ ಕೊಡಬೇಡಿ, ಮಾತುಕತೆಗೆ ಬನ್ನಿ: ಮುಖ್ಯಮಂತ್ರಿ ಯಡಿಯೂರಪ್ಪ ಮನವಿ

ಬೆಂಗಳೂರು, ಫೆ.12 :    ಕರ್ನಾಟಕ ಬಂದ್ ವಿಚಾರದಲ್ಲಿ ರಾಜಕಾರಣ ಮಾಡುವುದು ಬಿಟ್ಟು ಬಿಡಿ. ಕನ್ನಡ ಪರ ಸಂಘಟನೆಗಳು ಸರೋಜಿನಿ ಮಹಿಷಿ ವರದಿಯ ಬಗ್ಗೆ ತಮ್ಮ ಮನೆಗೆ ಬಂದು ಚರ್ಚಿಸಲಿ. ತಾವು ಅವರೊಂದಿಗೆ ಮಾತುಕತೆ ನಡೆಸಲು ಸಿದ್ಧನಿದ್ದೇನೆ.  ಆದರೆ ಬಂದ್ ಮಾಡಿ,  ಜನ ಸಾಮಾನ್ಯರಿಗೆ ತೊಂದರೆ ಕೊಡುವುದು ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಶಕ್ತಿಭವನದಲ್ಲಿ ಸುದ್ದಿಗಾರರೊಂದಿಗೆ ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ನವರು ಬಂದ್‌ಗೆ ಬೆಂಬಲ ನೀಡಿದ್ದಾರೆ. ಆದರೆ ಅವರು ಆಡಳಿತ ಪಕ್ಷದಲ್ಲಿ ಇದ್ದಾಗ ಏನು ಮಾಡಿದ್ದರು ?. ವಿರೋಧ ಪಕ್ಷದಲ್ಲಿ  ಕುಳಿತು ಬಂದ್ ಬೆಂಬಲಿಸುವ ಬದಲು,  ಆಡಳಿತ ಪಕ್ಷದಲ್ಲಿದ್ದಾಗ ಸಮಸ್ಯೆ ಬಗೆಹರಿಸಬಹುದಿತ್ತು ಎಂದು ಟಾಂಗ್ ನೀಡಿದರು.