ಡಾಕ್ಟರೇಟ್ ಮತ್ತು ನಿತ್ಯೋತ್ಸವ ಕನ್ನಡ ಸಿರಿ ಪ್ರಶಸ್ತಿ ಸನ್ಮಾನ
Doctorate and Nithyotsava Kannada Siri Award Honorary
ಡಾಕ್ಟರೇಟ್ ಮತ್ತು ನಿತ್ಯೋತ್ಸವ ಕನ್ನಡ ಸಿರಿ ಪ್ರಶಸ್ತಿ ಸನ್ಮಾನ
ಯಮಕನಮರಡಿ 27 : ತಮಿಳುನಾಡು ಹೊಸೂರಿನಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಪೂಜ್ಯ ಡಾ. ಕೃಷ್ಣಮೂರ್ತಿ ಮಹಾಸ್ವಾಮಿಗಳು, ಸಂಸ್ಕೃತಿ ಚಿಂತಕ ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಮೊದಲಾದ ಗಣ್ಯಮಾನ್ಯರ ಸಮಕ್ಷಮದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆ ಯಮಕನಮರಡಿ ಮಾಸ್ತಿ ಹೊಳೆಯ ಹಿರಿಯ ಜಾನಪದ ಕಲಾವಿದ ಗಾಯಕ ನಿಂಗೌಡ ಪಾಟೀಲ್ರವರು ಭಾಜನರಾಗಿದ್ದಾರೆ. ಇದೆ ಸಂದರ್ಭದಲ್ಲಿ ಯಮಕನಮರಡಿಯ ಕರಕುಶಲ ಕಲಾವಿದ ಸೋಮಶೇಖರ ಹೊರಕೇರಿರವರಿಗೆ ನಿತ್ಯೋತ್ಸವ ಕನ್ನಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಶ್ರೀಯುತರು 550 ಸಾಮೂಹಿಕ ವಿವಾಹಗಳಿಗೆ ಬಾಸಿಂಗವನ್ನು ಉಚಿತವಾಗಿ ನೀಡಿರುತ್ತಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಣವ ಮೀಡಿಯಾ ಹೌಸ್ ಪ್ರಕಾಶನ ದ ಗುರುರಾಜ ಪೋಶೆಟ್ಟಿಹಳ್ಳಿ ಮಾತನಾಡುತ್ತ ಎಲೇ ಮರೇ ಕಾಯಿಯಂತೆ ಸದ್ದಿದಿಲ್ಲದೆ ಸೇವೆ ಮಾಡುತ್ತಿರುವ ಸಾಧಕರನ್ನು ಗೌರವಿಸುವ ಈ ಕಾರ್ಯ ಅಭಿನಂದನೀಯ. ಸರ್ಕಾರ ಗುರುತಿಸಿ ಉನ್ನತ ಪುರಸ್ಕಾರಗಳು ಲಭಿಸುವಂತಾಗಲಿ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 