ಹಾವೇರಿ: ಮೇ 05: ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ಸೋಂಕು ಹೆಚ್ಚಾಗದಂತೆ ಗರಿಷ್ಠ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು. ಅಗತ್ಯ ವೈದ್ಯಕೀಯ ಸೌಲಭ್ಯಗಳೊಂದಿಗೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಭಾಯಿಸಲು ಸಿದ್ಧರಿರುವಂತೆ ವೈದ್ಯಾಧಿಕಾರಿಗಳಿಗೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಗೃಹ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.
ಬೆಂಗಳೂರಿನಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವೆಬ್ ಮೂಲಕ ವಿಡಿಯೋ ಸಂವಾದ ನಡೆಸಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಹಾಗೂ ಲಾಕ್ಡೌನ್ ಸಡಿಲಿಕೆ ನಂತರದ ವಿವರಗಳನ್ನು ಪಡೆದುಕೊಂಡರು. ಜಿಲ್ಲಾ ಆಸ್ಪತ್ರೆಯಲ್ಲಿ ಆಂತರಿಕ ವ್ಯವಸ್ಥೆಯನ್ನು ಬಲಪಡಿಸಿಕೊಳ್ಳಿ. ಅಗತ್ಯ ವೈದ್ಯಕೀಯ ಸಿಬ್ಬಂದಿ, ವೈದ್ಯಕೀಯ ಸೌಲಭ್ಯಗಳನ್ನು ಬಲಪಡಿಸಿಕೊಳ್ಳಿ, ಕನಿಷ್ಠ ಮೂರು ಸಾವಿರ ಗುಣಮಟ್ಟದ ಪಿಪಿ ಕಿಟ್ಗಳನ್ನು ತರಿಸಿಕೊಳ್ಳಲು ಇಂದೇ ಪ್ರಸ್ತಾವನೆ ಸಲ್ಲಿಸಿ ಎಂದು ಸೂಚನೆ ನೀಡಿದರು.
ತಕ್ಷಣಕ್ಕೆ ಒಂದು ಸಾವಿರ ಗುಣಮಟ್ಟದ ಪಿಪಿ ಕಿಟ್ಗಳನ್ನ ಖರೀದಿಸಿ, ಮಾಸ್ಕ್, ಸ್ಯಾನಿಟೈಜರ್ ಸೇರಿದಂತೆ ಯಾವುದೇ ಕೊರತೆಯಾಗಬಾರದು. ಜಿಲ್ಲಾ ಆಸ್ಪತ್ರೆಯಲ್ಲಿ ಈಗಿರುವ ಕೇಂದ್ರೀಕೃತ ಆ್ಯಕ್ಸಿಜನ್ ಪೂರೈಕೆ 30 ಬೆಡ್ಗಳಿಂದ 50 ಬೆಡ್ಗಳಿಗೆ ಹೆಚ್ಚಿಸಿ ತಕ್ಷಣ ಸಿದ್ಧತೆಮಾಡಿಕೊಳ್ಳಿ. ಎಲ್ಲ ತಾಲೂಕಾ ಆಸ್ಪತ್ರೆಗಳಿಗೂ ಮಾಸ್ಕ್, ಸ್ಯಾನಿಟೈಜರ್, ಕೋವಿಡ್ ಸುರಕ್ಷಾ ಕಿಟ್ಗಳನ್ನು ಹೆಚ್ಚುವರಿ ಪೂರೈಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.
ತಪಾಸಣೆ: ಮನೆ ಮನೆ ಆರೋಗ್ಯ ತಪಾಸಣೆ, ಕ್ಷೀಪ್ರ ಆರೋಗ್ಯ ತಪಾಸಣೆ ಹೊರತಾಗಿಯೂ ವಿಶೇಷವಾಗಿ ಕೋವಿಡ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಶಿಗ್ಗಾಂವ ಹಾಗೂ ಸವಣೂರು ತಾಲೂಕಿನಲ್ಲಿ ವೈದ್ಯಾಧಿಕಾರಿಗಳೇ ಖುದ್ದಾಗಿ ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆಯನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಸವಣೂರಿನಲ್ಲಿ ಫಿವರ್ ಕ್ಲಿನಿಕ್ ಸ್ಥಾಪಿಸಿ, ಸವಣೂರ ಸಾರ್ವಜನಿಕ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವತರ್ಿಸಿ. ಕನಿಷ್ಠ 20 ಬೆಡ್ಗಳ ಕೇಂದ್ರೀಕೃತ ಆ್ಯಕ್ಸಿಜನ್ ವ್ಯವಸ್ಥೆಯ ವಾಡರ್್ಗಳನ್ನು ಸಿದ್ಧಮಾಡಿಕೊಳ್ಳಿ. ಸೀಲ್ಡೌನ್ ಪ್ರದೇಶದಲ್ಲಿ ನಿಯಮಿತವಾಗಿ ಚರಂಡಿಗಳ ಸ್ವಚ್ಛತೆ, ಔಷಧಿ ಸಿಂಪರಣೆ, ಅಗತ್ಯವಿದ್ದರೆ ಅಗ್ನಿಶಾಮಕ ವಾಹನ ಬಳಿಸಿ ಔಷಧಿ ಸಿಂಪರಣೆಗೆ ಕ್ರಮವಹಿಸಿ. ಈ ಪ್ರದೇಶವನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸಿ. ಸೋಂಕು ಹೆಚ್ಚಾಗದಂತೆ ಗರಿಷ್ಠವಾದ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ, ಸಮನ್ವಯತೆಯಿಂದ ಪರಿಸ್ಥಿತಿಯನ್ನು ಎದುರಿಸಿ ಯಾವುದೇ ಸೌಕರ್ಯಗಳು ಬೇಕಾದರೂ ನೇರವಾಗಿ ನನ್ನೊಂದಿಗೆ ಮಾತನಾಡಿ. ಯಾವುದೇ ಹಿಂಜರಿಕೆ ಬೇಡ ಎಂದು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬಿದರು.
ಸೀಲ್ಡೌನ್ ಮಾಡಿರುವ ಸವಣೂರು ಪಟ್ಟಣದ ಎಸ್.ಎಂ.ಕೃಷ್ಣ ನಗರದಲ್ಲಿ ತೀವ್ರ ನಿಗಾವಹಿಸಬೇಕು. ಸಾರ್ವಜನಿಕರ ಓಡಾಟವನ್ನು ನಿಯಂತ್ರಿಸಬೇಕು. ಸವಣೂರಿನಲ್ಲಿ ಘೋಷಣೆಮಾಡಿರುವ ಕಂಟೋನ್ಮೆಂಟ್ ಹಾಗೂ ಬಫರ್ ಜೋನ್ಗಳಲ್ಲಿ ತೀವ್ರ ನಿಗಾವಹಿಸಬೇಕು. ಪ್ರತಿದಿನ ಅಲ್ಲಿನ ಸ್ಥಿತಿಗತಿಯ ಮಾಹಿತಿಯನ್ನು ನೀಡಬೇಕು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಅಪರ ಪೊಲೀಸ್ ವರಿಷ್ಠಾಧಿಕಾರಿಗಳು ಪಯರ್ಾಯದಿನ ದಿನ ಭೇಟಿ ಪರಿಶೀಲನೆ ನಡೆಸಬೇಕು. ಖುದ್ದು ಉಸ್ತುವಾರಿ ವಹಿಸಿ ಪರಿಸ್ಥಿತಿಯನ್ನು ನಿಭಾಯಿಸಬೇಕು. ಕೆಳಹಂತದ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸೂಚನೆ ನೀಡಿದರು.
ಚೆಕ್ಪೋಸ್ಟ್ಗಳನ್ನು ಬಿಗಿಗೊಳಿಸಿ, ಎಲ್ಲ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆಗೊಳಪಡಿಸಿ. ಯಾವುದೇ ದೂರುಗಳಿಗೂ ತಲೆಕಡಿಸಿಕೊಳ್ಳಬೇಡಿ. ಪಾಸ್ ಇದ್ದವರಿಗೆ ಮಾತ್ರ ಗಡಿಯೊಳಗೆ ಪ್ರವೇಶ ನೀಡಿ. ಪ್ರತಿ ವಾಹನದ ಚಲನವಲನಗಳು ಸಿಸಿ ಕ್ಯಾಮರಾಗಳಲ್ಲಿ ದಾಖಲಾಗಬೇಕು.
ಜಿಲ್ಲೆಯಲ್ಲಿ ಸ್ಥಾಪಿಸಲಾದ ಎಲ್ಲ 24 ಚೆಕ್ ಪೋಸ್ಟ್ಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು. ಪ್ರತಿ ವಾಹನದ ವಿವರ, ವಾಹನ ಚಾಲಕನ ಹೆಸರು, ಕ್ಲಿನಿರ್ ಹೆಸರು, ವಾಹನ ಮಾಲಿಕನ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆಗಳನ್ನು ಪಡೆದು ದಾಖಲುಮಾಡಿಕೊಳ್ಳಬೇಕು. ಇದರಿಂದ ಸಂಪರ್ಕ ವಿಳಾಸ ಪತ್ತೆಗೆ ಸುಲಭವಾಗಲಿದೆ ಎಂದು ಸಲಹೆ ನೀಡಿದರು.
ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿದರ್ೆಶಕ ವಿನೋದಕುಮಾರ ಹೆಗ್ಗಳಗಿ ಇತರರು ಭಾಗವಹಿಸಿದ್ದರು.