ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ನಿರ್ಲಕ್ಷ್ಯ ಬೇಡ - ಡಿವೈಎಸ್ಪಿ ಸಂತೋಷ
Don't be negligent about road safety rules - DySP Santhosh
ಹೂವಿನಹಡಗಲಿ 12: ಪ್ರತಿಯೊಬ್ಬ ನಾಗರಿಕರೂ ರಸ್ತೆಗಳಲ್ಲಿ ವಾಹನ ಚಾಲನೆ ಮಾಡುವಾಗ ರಸ್ತೆ ಸುರಕ್ಷತಾ ನಿಯಮಗಳ ಕುರಿತಂತೆ ನಿರ್ಲಕ್ಷ್ಯ ತೋರದೇ ಸರಿಯಾಗಿ ಪಾಲಿಸಿದಾಗ ಮಾತ್ರ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಹರಪನಹಳ್ಳಿಉಪವಿಭಾಗದ ಡಿವೈಎಸ್ಪಿ ಸಂತೋಷ ಚೌವ್ಹಾಣ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಮಾಸಾಚರಣೆ ,ಕಾರ್ಯ ಕ್ರಮ ,ಬೈಕ್ ಜಾಗೃತಿ ಚಾಲನೆ ನೀಡಿ ಮಾತನಾಡಿದರು.ಕುಡಿದು ವಾಹನ ಚಾಲನೆ ಮಾಡುವುದು, ಮೊಬೈಲ್ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವುದು, ಮಕ್ಕಳಲ್ಲಿ ಬೈಕ್ ಚಾಲನೆಗೆ ಕೊಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಎಂದು ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರು.
ಸಿಪಿಐ ದೀಪಕ್ ಬೊಸರೆಡ್ಡಿ ಮಾತನಾಡಿಚಾಲಕರು ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯತೆ ತೋರದೆ ನಿಯಮ ಪಾಲನೆ ಮಾಡಿ. ದ್ವಿಚಕ್ರವಾಹನ ಸವಾರರು ಹೆಲ್ಮಟ್ ಧರಿಸಿರಬೇಕು. ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಅಮಾಯಕರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನು ಬೀದಿಪಾಲು ಮಾಡುತ್ತಾರೆ.ಕಡ್ಡಾಯ ವಾಗಿ ಹೆಲ್ಮೆಟ್ ಧರಿಸಿ ಅಪಘಾತ ತಪ್ಪಿಸಿ ಎಂದರು. ಹಿರೇಹಡಗಲಿ ಪಿಎಸ್‌ಐ ಭರತ್ ರೆಡ್ಡಿ. ಹೂವಿನಹಡಗಲಿ ,ಇಟ್ಟಿಗಿ.ಹಿರೇಹಡಗಲಿ. ಎಸ್ ಐ .ಮತ್ತು ಸಿಬ್ಬಂದಿ ಇದ್ದರು. ಇದೇ ವೇಳೆ ಪಟ್ಟಣದಲ್ಲಿ ಪೊಲೀಸರು ಬೈಕ್ ರಾಲಿ ಮೂಲಕ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಧರಿಸಬೇಕು ಎಂದು ಜಾಗೃತಿ ಮೂಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 