ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ: ಸುಮಲತಾ ಅಂಬರೀಷ್ ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ: ಸುಮಲತಾ ಅಂಬರೀಷ್
Don't create unnecessary controversies in mother-son relationship: Sumalatha Ambareesh
ಬೆಂಗಳೂರು 12: ಸ್ಯಾಂಡಲ್‌ವುಡ್ ನಟ ದರ್ಶನ್ ಸೋಶಿಯಲ್ ಮೀಡಿಯಾದಲ್ಲಿ ಸುಮಲತಾ ಅಂಬರೀಷ್ ಸೇರಿ 6 ಮಂದಿಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿರುವ ವಿಚಾರ ದೊಡ್ಡದಾಗಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ..
ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಒಂದಷ್ಟು ಸಮಯ ಕುಟುಂಬದ ಜತೆಯಿದ್ದ ದರ್ಶನ್ ಚಿತ್ರರಂಗಕ್ಕೆ ಮರಳಿದ್ದಾರೆ. ಆದರೆ ಚಿತ್ರರಂಗಕ್ಕೆ ಮರಳುವ ಮುನ್ನ ದರ್ಶನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆಪ್ತರನ್ನು ಅನ್‌ಫಾಲೋ ಮಾಡಿದ್ದಾರೆ.
ದರ್ಶನ್ ಅವರಿಗೆ ತಾಯಿ ಸಮಾನರಂತಿದ್ದ ಸುಮಲತಾ ಅಂಬರೀಶ್ ಅಭಿಷೇಕ್ ಅಂಬರೀಶ್, ಅವಿವಾ ಬಿದ್ದಪ್ಪ, ಡಿ ಕಂಪನಿ, ದಿನಕರ್ ತೂಗುದೀಪ್, ಪುತ್ರ ವಿನೀಶ್ ಅವರನ್ನು ಅನ್‌ಫಾಲೋ ಮಾಡಿದ್ದಾರೆ.
ಇದರ ಬೆನ್ನಲ್ಲೇ ಸುಮಲತಾ ಅವರು ಕೂಡ ಗೂಡಾರ್ಥ ಮೂಡುವ ಸ್ಟೋರಿ ಹಂಚಿಕೊಂಡಿದ್ದರು.
ಬೆಸ್ಟ್ ಆಕ್ಟಿಂಗ್ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತೆ ಅಂದ್ರೆ.. ಯಾರು ಸತ್ಯವನ್ನ ತಿರುಚುತ್ತಾರೋ, ತಮ್ಮದೇ ತಪ್ಪು ಇಟ್ಕೊಂಡು ಬೇರೆಯವರ ಮೇಲೆ ಹಾಕಿ ನೋವು ಮಾಡೋದು, ತಮ್ಮ ಮೇಲಿನ ನಿಂದನೆಯನ್ನ ಬೇರೆಯವರ ಮೇಲೆ ಹಾಕೋದು, ಗೂಬೆ ಕೂರಿಸೋದು ಮಾಡಿ ತಮ್ಮನ್ನ ತಾವು ಹೀರೋ ಎಂಬಂತೆ ಬಿಂಬಿಸಿಕೊಳ್ಳೋದು ಎಂದು ಸುಮಲತಾ ಸ್ಟೋರಿ ಹಾಕಿಕೊಂಡಿದ್ದರು.
ಆದರೆ ಇದೀಗ ಸುಮಲತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಎಲ್ಲ ಗೊಂದಲಕ್ಕೂ ತೆರೆ ಎಳೆದಿದ್ದಾರೆ.
ನನ್ನ ಹಿಂದಿನ ಒಂದು ಪೋಸ್ಟ್ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ; ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ. ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು.
ನಿಜಕ್ಕೂ, ದರ್ಶನ್ ಅವರು ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇದು ಅವರ ವೈಯಕ್ತಿಕ ಆಯ್ಕೆ, ಮತ್ತು ಅದನ್ನು ಎಲ್ಲರೂ ಗೌರವಿಸಬೇಕು. ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು ಅಗತ್ಯವಿಲ್ಲ. ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ. ನನ್ನ ಪೋಸ್ಟ್ ಯಾರನ್ನೂ ಉದ್ದೇಶಿಸಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ನಾನು ನನ್ನ ಕುಟುಂಬ ಹಾಗೂ ಆಪ್ತರ ವಿಚಾರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎಳೆದು ತರುವ ಅಭ್ಯಾಸವನ್ನು ಎಂದಿಗೂ ಹೊಂದಿಲ್ಲ ಎಂದು ಬರೆದುಕೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 