ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಗೊತ್ತಿಲ್ಲ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ನವದೆಹಲಿ ಆಗಸ್ಟ್ 25    ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ತಮಗೆ ಮಾಹಿತಿಯಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭಾನುವಾರ ಇಲ್ಲಿ ತಿಳಿಸಿದ್ದಾರೆ.     ಸಚಿವರಿಗೆ ಖಾತೆ ಹಂಚಿಕೆ ಇಂದು ಪೂರ್ಣ ವಾಗಲಿದೆ. ಪಟ್ಟಿ ಸಿದ್ದವಿದ್ದು, ಸಂಜೆ ವೇಳೆಗೆ ಪ್ರಕ್ರಿಯೆ ಪೂರ್ಣವಾಗಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.      ದೇಶಕಂಡ ಅಪರೂಪದ ಮುತ್ಸದ್ದಿ ರಾಜಕಾರಣಿ ಅರುಣ್ ಜೇಟ್ಲಿ ನಿಧನದಿಂದ ತುಂಬಲಾರದ ನಷ್ಟವಾಗಿದೆ. ಕರ್ನಾಟಕ ಬಿಜೆಪಿ ಜತೆ ಜೇಟ್ಲಿ ಅವರಿಗೆ ಉತ್ತಮ  ನಂಟಿತ್ತು ಎಂದು ಅವರು ಸ್ಮರಿಸಿದ್ದಾರೆ.     ಇದಕ್ಕೂ ಮುನ್ನ, ಯಡಿಯೂರಪ್ಪ ಪಕ್ಷದ ಕೇಂದ್ರ ಕಚೇರಿಯಲ್ಲಿ ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.     ಉಪಮುಖ್ಯಮಂತ್ರಿ ಹುದ್ದೆ: ವರಿಷ್ಠರ ತೀರ್ಮಾನವೇ ಅಂತಿಮ-ಶ್ರೀರಾಮುಲು    ಉಪಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ತಮಗೆ ವೈಯಕ್ತಿಕವಾಗಿ ಆಸೆ ಇರಬಹುದು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಮಾತನಾಡುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ಪಕ್ಷದ ವರಿಷ್ಟರು ಕೈಗೊಳ್ಳುವ ತೀರ್ಮಾನವೇ ಅಂತಿಮ. ಅದಕ್ಕೆ ಎಲ್ಲರೂ  ಇದಕ್ಕೆ ಬದ್ದರಾಗಿರಬೇಕು ಎಂದು ಸಚಿವ ಶ್ರೀರಾಮುಲು ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.