ಸುಳ್ಳ ಸುದ್ದಿಗಳಿಗೆ ಕಿವಿ ಕೊಡಬೇಡಿ
Don't listen to fake news
ಲೋಕದರ್ಶನ ವರದಿ
ಇಂಡಿ 15: ಸಾಮಾಜಿಕ ಜಾಲತಾಣಗಳಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶ್ರೀಗಳ ಭಕ್ತರು ಇಂಡಿ ಗ್ರಾಮಾಂತರ ಪಿಎಸ್ಐ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಳು ಮುಳಜಿ, ಕೂಡಲಸಂಗಮ ಶ್ರೀಗಳ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಕೂಡಲೇ ಬಂದಿಸಬೇಕು.
ವ್ಯಾಟ್ಸಪ್, ಫೇಸ್ಬುಕ್, ಎಕ್ಸ ಖಾತೆ, ಯುಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುತ್ತಿದ್ದು ಕುಮಾರ್ ರೇವಣ್ಣ, ರಮೇಶ್ ಮಲಾಲಿ, ಕೆಎಸ್ಆರ್ಟಿ ಶೇಕರ, ಪಂಚಮಸಾಲಿ ಆಲ್ ಕರ್ನಾಟಕ ಗ್ರೂಪ್ ವಿಜಯಪುರ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ವಿಜಯಪುರ, ಈ ಎಲ್ಲ ಖಾತೆಗಳಿಂದ ಶ್ರೀಗಳಿಗೆ ಅವಹೇಳನ ಮಾಡುತ್ತಿದ್ದು ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು. ರಮೇಶ ಕಲ್ಯಾಣಿ, ಮಹೇಶ ಹೂಗಾರ, ವಿಜಯಕುಮಾರ ರಾಠೋಡ್, ಅರವಿಂದ ಪಾಟೀಲ ಸೇರಿದಂತೆ ಇನ್ನಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 