ದುಶ್ಚಟಗಳಿಗೆ ದಾಸರಾಗಿ ಅಮೂಲ್ಯವಾದ ಜೀವನ ಕಳೆದುಕೊಳ್ಳಬೇಡಿ: ನ್ಯಾ.ಸಂದೀಪ ಪಾಟೀಲ
Don't lose your precious life by becoming a slave to vices: Justice Sandeep Patil
ಬೆಳಗಾವಿ 27: ಹುಟ್ಟಿನಿಂದ ಯಾವ ವ್ಯಕ್ತಿಯು ಕೆಟ್ಟ ಚಟಗಳಿಂದ ಹುಟ್ಟಿರುವುದಿಲ್ಲ. ಬೇರೆಯವರ ಅನುಕರಣೆ, ಒತ್ತಾಯಕ್ಕೆ ಮಣಿದು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇಂದಿನ ಆಧುನಿಕ ಯುಗದಲ್ಲಿ ವಯಸ್ಸಿನ ಯಾವುದೆ ಇತಿ ಮಿತಿಗಳಿಲ್ಲದೆ ಅನೇಕ ಜನ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಹೆಚ್ಚಾಗಿ ಇಂದಿನ ಯುವ ಪೀಳಿಗೆಯು ಇಂತಹ ದುಶ್ಚಟಗಳಿಗೆ ಒಳಗಾಗಿ ಕ್ಯಾನ್ಸರ ನಂತಹ ಮಾರಣಾಂತಿಕ ರೋಗಕ್ಕೆ ತುತ್ತಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಸಂದೀಪ ಪಾಟೀಲ ಅವರು ಕಳವಳ ವ್ಯಕ್ತಪಡಿಸಿದರು.
ಕೇಂದ್ರ ಕಾರಾಗೃಹ ಬೆಳಗಾವಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೆ.ಎಲ್.ಇ ನರ್ಸಿಂಗ್ ಕಾಲೇಜ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಇವರುಗಳ ಸಂಯುಕ್ತಾಶ್ರಯದಲ್ಲಿ ಜೂನ 26ರಂದು ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸೃಷ್ಠಿಯ ಅತ್ಯಮೂಲ್ಯವಾದ ಕೊಡುಗೆ ಎಂದರೆ ನಮ್ಮ ದೇಹ. ಇದರ ಬಗ್ಗೆ ನಾವೆಲ್ಲರು ಕಾಳಜಿ ತೆಗೆದುಕೊಳ್ಳಬೇಕು ಕಾರಣ ಸಮಾಜದಲ್ಲಿ ಪೆಂಡಂಭೂತವಾಗಿ ಕಾಡುತ್ತಿರುವ ಮಾದಕ ವಸ್ತುಗಳ ಸೇವನೆಯನ್ನು ತ್ಯಜಿಸಿ ಯೋಗ, ಧ್ಯಾನ, ಪ್ರಾಣಾಯಾಮದಂತಹ ಉತ್ತಮ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ತಾವೆಲ್ಲ ಬಿಡುಗಡೆ ನಂತರ ಸಮಾಜದಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ. ಗೀತಾ ಕಾಂಬಳೆ ಮಾತನಾಡಿ 1987ರಿಂದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆಯ ವಿರೋಧಿ ದಿನವನ್ನು ಆಚರಿಸಲಾಗುತ್ತಿದ್ದು ಜನ ಸಾಮಾನ್ಯರಲ್ಲಿ ಇದರ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕಾರಾಗೃಹದ ಪ್ರಭಾರಿ ಮುಖ್ಯ ಅಧೀಕ್ಷಕ ವಿ. ಕೃಷ್ಣಮೂರ್ತಿ ಅವರು ಮಾತನಾಡಿದರು. ಕೆ.ಎಲ್.ಇ ಸಂಸ್ಥೆಯ ನರ್ಸಿಂಗ ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಿದ ಮಾದಕ ವಸ್ತುಗಳ ಸೇವನೆಯ ಕುರಿತಾದ ರೂಪಕ ಎಲ್ಲರ ಗಮನ ಸೆಳೆಯಿತು.
ಮುಖ್ಯ ಅತಿಥಿಗಳಾಗಿ ಕೆ.ಎಲ್.ಇ ನರ್ಸಿಂಗ್ ಕಾಲೇಜಿನ ಸಹಪ್ರಾಧ್ಯಾಪಕ ಸಂಗನಗೌಡರ ಆಗಮಿಸಿದ್ದರು. ಕಾರಾಗೃಹದ ಆಡಳಿತಾಧಿಕಾರಿ ಬಿ.ಎಸ್. ಪೂಜಾರಿ, ಸಹಾಯಕ ಅಧೀಕ್ಷಕ ಮಲ್ಲಿಕಾರ್ಜುನ ಕೊನ್ನೂರ ಹಾಗೂ ಮುಖ್ಯ ವೈದ್ಯಾಧಿಕಾರಿ ಡಾ. ಸಂಜಯ ಡುಮ್ಮಗೋಳ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಮನೋರೊಗ ತಜ್ಞ ಡಾ. ಸರಸ್ವತಿ, ಡಾ. ಶಾಲದಾರ ಹಾಗೂ ಕಾರಾಗೃಹದ ಜೈಲರಗಳಾದ ರಾಜೇಶ, ಬಸವರಾಜ, ರಮೇಶ ಉಪಸ್ಥಿತರಿದ್ದರು. ಕಾರಾಗೃಹದ ಶಿಕ್ಷಕ ಶಶಿಕಾಂತ ಯಾದಗುಡೆ ಸ್ವಾಗತಿಸಿ ನಿರೂಪಿಸಿದರು. ಸಂದ್ಯಾ ವಂದಿಸಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 