ಮಾನಸಿಕ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ಅಮೋಲ್ ಜೆ ಹೀರೆಕುಡಿ ಸಲಹೆ

ಮಾನಸಿಕ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ಅಮೋಲ್ ಜೆ ಹೀರೆಕುಡಿ ಸಲಹೆ Don't neglect mental health: Amol J Hirekudi's advice

ಮಾನಸಿಕ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ಅಮೋಲ್ ಜೆ ಹೀರೆಕುಡಿ ಸಲಹೆ 

ಬ್ಯಾಡಗಿ 25: ಖಿನ್ನತೆಯು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದಲ್ಲದೇ ದೈಹಿಕ ಆರೋಗ್ಯ ಮತ್ತು ವ್ಯಕ್ತಿಗಳ ಜೀವನೋಪಾಯದ ಮೇಲೂ ಪರಿಣಾಮ ಬೀರುತ್ತದೆ. ಮನೋರೋಗವನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಅಮೋಲ್ ಜೆ ಹೀರೆಕುಡಿ ಸಲಹೆ ನೀಡಿದರು.ಪಟ್ಟಣದ ವಕೀಲರ ಭವನದಲ್ಲಿ  ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಶುಕ್ರವಾರ  ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.ವ್ಯಕ್ತಿಯ ಮಾನಸಿಕ ಯೋಗಕ್ಷೇಮದ ಪ್ರಾಮುಖ್ಯತೆ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ದಿನಾಚರಣೆ ಆಚರಿಸಲಾಗುತ್ತಿದೆ. ಯುವ ಪೀಳಿಗೆ ಮಾನಸಿಕ ಸಮಸ್ಯೆಯನ್ನು ಹೆಚ್ಚಾಗಿ ಎದುರಿಸುತ್ತಿರುವುದು ಆತಂಕದ ಸಂಗತಿಯಾಗಿದೆ. ಮಾನಸಿಕ ರೋಗಿಗಳನ್ನು ನಿಕೃಷ್ಟವಾಗಿ ಕಾಣುವ ಪದ್ಧತಿ ಇನ್ನೂ ನಿಂತಿಲ್ಲ. ಇದರಿಂದ ಮಾನಸಿಕ ರೋಗಿಗಳು ಇನ್ನಷ್ಟು ಕೀಳರಿಮೆ ಅನುಭವಿಸುವಂತಾಗಿದೆ. ಮಾನಸಿಕ ಸಮಸ್ಯೆಯಿಂದ ಬಳಲುವವರು ಪಾಲಕರು ಅಥವಾ ಸ್ನೇಹಿತರ ಬಳಿ ತಮ್ಮ ಸಮಸ್ಯೆ ಬಗ್ಗೆ ಹೇಳಿಕೊಳ್ಳಬೇಕು. ಕೂಡಲೇ ತಜ್ಞ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.ಕಾರ್ಯದರ್ಶಿ ಹಾಗೂ ದಿವಾಣಿ ನ್ಯಾಯಾಧೀಶ ಸುರೇಶ ವಗ್ಗನವರ್ ಮಾತನಾಡಿ ಮನುಷ್ಯನ ಮಾನಸಿಕ ಒತ್ತಡಕ್ಕೆ ಒಳಗಾಗಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಎಂತಹ ಹಾದಿ ಹಿಡಿಯುವ ಮೊದಲು ಗಂಡಾಂತರದಿಂದ ಪಾರಾಗಬಹುದು ಮನಸ್ಸು ಯಾವಾಗಲೂ ಸಂತಸವಾಗಿರುವುದು ಅತಿ ಅವಶ್ಯಕ ಸಾರ್ವಜನಿಕವಾಗಿ ಹೆಚ್ಚು ಬೆರೆಯುವುದು ಮನಸ್ಸಿನ ಅನೇಕ ತೊಂದರೆಗಳಿಗೆ ಪರಿಹಾರ ಸಿಗುತ್ತದೆ ಎಂದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಕುರಿತು ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜು ಶಿಡೇನೂರ ಮಾತನಾಡಿದರು.ಕಾರ್ಯಕ್ರಮದಲ್ಲಿ ತಾಲೂಕ ವೈದ್ಯಾಧಿಕಾರಿ ಡಾ. ಕಾಂತೇಶ್ ಭಜಂತ್ರಿ. ಯೋಗಶಾಸ್ತ್ರಜ್ಞರು ಡಾ .ಸಂತೋಷ ಹಾಲುಂಡಿ.  ಸರ್ಕಾರಿ ವಕೀಲರಾದ ಪಿ ಸಿ ಸೀಗೆಹಳ್ಳಿ ಸರ್ಕಾರಿ ಅಭಿಯೋಜಕರಾದ ರಾಜಣ್ಣ ನ್ಯಾಮತಿ .ಪಿ  ಆರ್ ಲಮಾಣಿ. ವಕೀಲ ಸಂಘದ ಉಪಾಧ್ಯಕ್ಷರಾದ ಜಿ.ಬಿ.ಯಲಗಚ್ಚ. ಸಹಕಾರದರ್ಶಿ ಎಂ ಎಸ್‌.ಕುಮ್ಮುರ. ಹಿರಿಯ ನ್ಯಾಯವದಿಗಳಾದ ವಿ ಎಸ್ ಕಡಗಿ ಎಂಎಫ್ ಮುಳುಗುಂದ್ ಪಿಆರ್ ಮಠ ಬಿ ಎಸ್ ಸೂರಿ ಎಂ ಆರ್ ಹೊಂಬರಡಿ. ಎಂ ಜೆ ಮುಲ್ಲಾ. ಹಾಗೂ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಇತರ ಹಿರಿಯ ಮತ್ತು ಕಿರಿಯ ನ್ಯಾಯವಾದಿಗಳು. ಇಲಾಖೆ ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.