ಬೆಂಗಳೂರು, ಮೇ 15, ಭೂಗತ ಡಾನ್, ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.ಹಲವು ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಕಾಣಿಸಿಕೊಂಡಿದ್ದ ಮುತ್ತಪ್ಪ ರೈ, ಬಳಿಕ ಜಯಕರ್ನಾಟಕ ಸಂಘಟನೆ ಸ್ಥಾಪಿಸಿದ್ದರು. ಬೆಂಗಳೂರಿನ ಬಿಡದಿ ಬಳಿ ವಾಸವಾಗಿದ್ದರು. ಇಂದು ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದ್ದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಮಾತ್ರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.