ರಕ್ತದಾನ ಮಾಡಿ ಜೀವ ಉಳಿಸಿ
Donate blood and save lives.
ಬ್ಯಾಡಗಿ 31 : ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಲು ಆರೋಗ್ಯವಂತರೆಲ್ಲರೂ ಮುಂದೆ ಬರಬೇಕು ಎಂದು ಡಾ.ದೀಪಕ ಹಿರೇಮಠ ಹೇಳಿದರು.ಅವರು ತಾಲೂಕಿನ ಛತ್ರ ಗ್ರಾಮದಲ್ಲಿ ಸ್ವಯಂ ಪ್ರೇರಿತ ರಕ್ತದಾನದ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ತುರ್ತು ಸಂದರ್ಭದಲ್ಲಿ ಅಪಘಾತ ಸಂಭವಿಸಿದಾಗ, ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ರಕ್ತ ಅವಶ್ಯವಾಗಿರುತ್ತದೆ. ವಿಶೇಷವಾಗಿ ಎಲ್ಲ ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಹೇಳಿದರು.ಸಮಾಜ ಸೇವಕ ನಾಗರಾಜ ಆನ್ವೇರಿ ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ತುರ್ತು ಸಮಯದಲ್ಲಿ ರಕ್ತದ ಅವಶ್ಯಕತೆ ಇರುವುದರಿಂದ ಇನ್ನೊಂದು ಜೀವ ಉಳಿಸಲು ರಕ್ತದಾನ ಸಹಾಯವಾಗುತ್ತದೆ. ಪ್ರತಿಯೊಬ್ಬರೂ ಯಾವುದೇ ಫಲಾಪೇಕ್ಷೆ ಇಲ್ಲದೆ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಬೇಕು. 18 ರಿಂದ 60 ವರ್ಷದ ಒಳಗಿರುವ ಎಲ್ಲ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಅಪಘಾತಗಳು ಸಂಭವಿಸಿದಾಗ, ತುರ್ತು ಶಸ್ತ್ರಚಿಕಿತ್ಸೆಗಳ ಸಂದರ್ಭದಲ್ಲಿ ರೋಗಿಗಳು ರಕ್ತದಾನಿಗಳನ್ನೇ ಅವಲಂಬಿಸಿರುತ್ತಾರೆ. ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆಯಾಗುತ್ತದೆ. ದೇಹದಲ್ಲಿ ಹೊಸ ರಕ್ತ ಚಲನೆಯಿಂದ ಕಾರ್ಯತತ್ಪರತೆ, ಜ್ಞಾಪಕ ಶಕ್ತಿ ವದ್ಧಿ ಯಾಗುತ್ತದೆ. ರಕ್ತದಲ್ಲಿ ಕೊಬ್ಬಿನಾಂಶ ಕಡಿಮೆ ಮಾಡಲು ಸಹಾಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಆಅತಿಥಿಗಳಾಗಿ ಸಂತೋಷ ಹಿರೇಮಠ, ಬಸವರಾಜ ಪೊಟೆರ. ಬಸವರಾಜ ಹಾವೇರಿಮಠ,ಯಲ್ಲಪ್ಪ ಪೊಟೇರ,ಕುಮಾರ ಹಾವೇರಿ .ಬೀರ್ಪ ಕುಪ್ಪೆಲೂರ .ಕುಮಾರ ಗೌಡ್ರ,ದುಂಡೆಪ್ಪ ಕುರಿ .ರಮೇಶ ಬಣಕಾರ ಸೇರಿದಂತೆ ಇತರರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 