ಕನ್ನಡ ವಿವಿ ನೌಕರರಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ

ಬಳ್ಳಾರಿ,ಮೇ 14: ಕೋವಿಡ್-19 ಹಿನ್ನೆಲೆಯಲ್ಲಿ ಹೊಸಪೇಟೆ ತಾಲೂಕಿನ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ನೌಕರರು ತಮ್ಮ ಏಪ್ರಿಲ್-2020 ಮಾಹೆಯ ಒಂದು ದಿನದ ವೇತನ ಕಡಿತಗೊಳಿಸಿದ ಮೊತ್ತವನ್ನು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ರಮೇಶ ಅವರು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಮೂಲಕ ಕರೋನಾ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದರು.

ಕುಲಪತಿಗಳು ಗುರುವಾರ ಜಿಲ್ಲಾಧಿಕಾರಿಗಳ ಕಾಯರ್ಾಲಯದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಚೆಕ್ ನೀಡಿದರು. 

     ಈ ಸಂದರ್ಭದಲ್ಲಿ ಕುಲಸಚಿವ ಡಾ.ಎ.ಸುಬ್ಬಣ್ಣ ರೈ ಮತ್ತು ತಾಂತ್ರಿಕ ವಿಭಾಗದ ಮುಖ್ಯಸ್ಥರಾದ   ನಂಜಯ್ಯನವರ್ ಸೇರಿದಂತೆ ಇತರೆ ನೌಕರರು ಇದ್ದರು.