ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ
Donation of books to Betageri Gram Panchayat Library
ಬೆಟಗೇರಿ 04: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮುಖ್ಯೋಪಾಧ್ಯಯರು ಸ್ಥಳೀಯ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಅರಿವು ಕೇಂದ್ರಕ್ಕೆ ಶಾಲಾ ಮಕ್ಕಳ ಓದಿಗೆ ಪ್ರಸಕ್ತ ವರ್ಷದ 6 ಮತ್ತು 7 ನೇ ತರಗತಿಯ ಪಠ್ಯ ಪುಸ್ತಕಗಳನ್ನು ನ.4 ರಂದು ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರಿಗೆ ಉಚಿತವಾಗಿ ನೀಡಿದರು.
ಈ ವೇಳೆ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಮುಖ್ಯೋಪಾಧ್ಯಯ ಸಿದ್ದಪ್ಪ ಸನದಿ ಮಾತನಾಡಿ, ಇಲ್ಲಿಯ ಶಾಲಾ ಮಕ್ಕಳ ಮತ್ತು ಯುವಕರ ಓದಿಗೆ ಮತ್ತು ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಲು ಇಲ್ಲಿಯ ಗ್ರಂಥಾಲಯ ಮತ್ತು ಅರಿವು ಕೇಂದ್ರ ಸಹಕಾರಿಯಾಗಿದೆ ಎಂದರು.
ಉಭಯ ಶಾಲೆಯ ಮುಖ್ಯೋಪಾಧ್ಯರಾದ ಎಸ್.ಬಿ. ಸನದಿ, ವೈ.ಸಿ. ಶೀಗಿಹಳ್ಳಿ, ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ವಿಶ್ವನಾಥ ಶೀಗಿಹಳ್ಳಿ ಸೇರಿದಂತೆ ಸ್ಥಳೀಯರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 