ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿ : ಇತ್ಯರ್ಥ ಕಾಣದ ಸಭೆ, ಶಿಕ್ಷಣ ಸಂಸ್ಥೆಗಳವರ ಪಲಾಯನಾ.!!
Donation scam of private educational institutions: Meeting without resolution, educational instituti
ರಾಣೇಬೆನ್ನೂರು 21 : ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿಯಿಂದ ನಲುಗಿ ಹೋಗಿದ್ದ ವಿದ್ಯಾರ್ಥಿಗಳು ಮತ್ತು ಪಾಲಕರ ನೆರವಿಗೆ ನಿಂತು ಕರ್ನಾಟಕ ರಾಜ್ಯ ವಿದ್ಯಾರ್ಥಿ ವಿಕಾಸ್ ಪರಿಷತ್ ನಿರಂತರವಾಗಿ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ಇಂದು ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಉಪ ತಹಸಿಲ್ದಾರ ಅರಣು ಕಾರ್ಗಿ ಅವರ ಅಧ್ಯಕ್ಷತೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆ ಕರೆಯಲಾಗಿತ್ತು ಈ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ಯಾಮಸುಂದರ್ ಅಡಿಗರವರು ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿಯಮಾವಳಿಗಳ ಪ್ರಕಾರ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳು ಆ ಸಂಸ್ಥೆಯ ವಿದ್ಯಾರ್ಥಿಗಳ ಸಂಖ್ಯೆಗಳಿಗನುಗುಣವಾಗಿ ಪಾರದರ್ಶಕವಾದ ಶಿಕ್ಷಣ ಶುಲ್ಕವನ್ನ ಪಡೆಯುವುದುಕ್ಕೆ ಕಾನೂನಿನಲ್ಲಿ ಅವಕಾಶವಿದೆ ಅದು ಬಿಟ್ಟು ಎಲ್ಲಾ ಮಾದರಿಯ ಅಭಿವೃದ್ಧಿ ಶುಲ್ಕಗಳನ್ನ ಹೆಚ್ಚುವರಿಯಾಗಿ ವಿದ್ಯಾರ್ಥಿಗಳಿಂದ ಒತ್ತಾಯ ಪೂರ್ವಕವಾಗಿ 40 ರಿಂದ 50 ಸಾವಿರ ರೂಪಾಯಿ ಡೊನೇಷನ್ ವಸೂಲಿ ಮಾಡುತ್ತಿರುವ ಬಗ್ಗೆ ಇಲಾಖೆಗೆ ಸಂಘ ಸಂಸ್ಥೆಗಳಿಂದ ಮತ್ತು ಪಾಲಕರಿಂದ ದೂರುಗಳು ಸಲ್ಲಿಕೆಯಾಗಿವೆ.
ಜೊತೆಗೆ ಡೊನೇಷನ್ ನೀಡದ ವಿದ್ಯಾರ್ಥಿಗಳನ್ನ ಶಾಲಾ ಆವರಣದಲ್ಲಿ ಬಿರು ಬಿಸಿಲಿನಲ್ಲಿ ನಿಲ್ಲಿಸುವುದು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅಪಮಾನ ಮಾಡುವುದು ಮತ್ತು ತರಗತಿಗಳಿಂದ ದೂರ ನಿಲ್ಲಿಸುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಶಿಕ್ಷಣ ನೀಡುವ ನೆಪದಲ್ಲಿ ಮಾನವೀಯ ಮೌಲ್ಯಗಳನ್ನ ಗಾಳಿಗೆ ತೂರಿ ಮಕ್ಕಳ ಶಿಕ್ಷಣದ ಹಕ್ಕುಗಳ ಉಲ್ಲಂಘನೆ ಮಾಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಅವಕಾಶ ಶಿಕ್ಷಣ ಇಲಾಖೆಗೆ ಇದೆ ಎನ್ನುವ ಸತ್ಯವನ್ನ ಅರ್ಥಮಾಡಿಕೊಳ್ಳಬೇಕು ಎಂದರು. ರಾಣೇಬೆನ್ನೂರು ತಾಲೂಕಿನಧ್ಯಂತ 80ಕ್ಕೂ ಹೆಚ್ಚು ಖಾಸಿಗೆ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಮತ್ತು ಆ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರು ಕೂಡ ಈ ಸಭೆಗೆ ಆಗಮಿಸಿದ್ದಾರೆ ಈ ಸಭೆಯಲ್ಲಿ ಭಾಗವಹಿಸಿದ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರು ಒಬ್ಬೊಬ್ಬರಾಗಿ ನರ್ಸರಿಯಿಂದ ಹಿಡಿದು ಹತ್ತನೇ ತರಗತಿಯವರೆಗೆ ಎಷ್ಟೆಷ್ಟು ಶುಲ್ಕವನ್ನ ಪಡೆಯುತ್ತೀರಿ ಎಂಬುವುದರ ಬಗ್ಗೆ ಈ ಬಹಿರಂಗ ಸಾರ್ವಜನಿಕ ಸಭೆಯಲ್ಲಿ ಮಾಹಿತಿ ನೀಡಬೇಕು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 