ಯಲ್ಲಮ್ಮ ದೇವಸ್ಥಾನದ ಹುಂಡಿಗಳಲ್ಲಿ ರೂ 3.07 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹ
Donations worth Rs 3.07 crore collected in Yellamma temple's hundis
ಉಗರಗೋಳ, 12 : ಇದರಲ್ಲಿ ರೂ 2,78,82,970 ನಗದು, ರೂ 16.16 ಲಕ್ಷ ಮೌಲ್ಯದ ಮೌಲ್ಯದ 100 ಗ್ರಾಂ ಚಿನ್ನಾಭರಣ, ರೂ12.35 ಲಕ್ಷ ಮೌಲ್ಯದ 4.547 ಕೆ.ಜಿ ಬೆಳ್ಳಿ ಆಭರಣ ಸೇರಿವೆ. ಕಳೆದ ವಾರದಲ್ಲೂ ಹುಂಡಿ ಎಣಿಕೆ ನಡೆದಿತ್ತು. ಈ ಬಾರಿ ಮಾರ್ಚ್ 9ರಿಂದ 12ರ ಅವಧಿಯಲ್ಲಿ ನಡೆದ ಎಣಿಕೆಯಲ್ಲಿ ಇಷ್ಟೊಂದು ದಾಖಲೆ ಕಾಣಿಕೆ ಸಂಗ್ರಹವಾಗಿದೆ. ವಿದ್ಯಾರ್ಥಿಗಳಿಂದಲೂ ಎಣಿಕೆ ಪ್ರತಿಬಾರಿ ಯಲ್ಲಮ್ಮ ದೇವಸ್ಥಾನ ಸಿಬ್ಬಂದಿ, ಧಾರ್ಮಿಕ ಮತ್ತು ದತ್ತಿ ಇಲಾಖೆ ಕಚೇರಿ, ತಹಶೀಲ್ದಾರ್ ಕಚೇರಿ ನೌಕರರು ಎಣಿಕೆ ಕಾರ್ಯದಲ್ಲಿ ತೊಡಗುತ್ತಿದ್ದರು. ಆದರೆ, ಈ ಬಾರಿ ಎಣಿಕೆ ಸ್ಥಳದಲ್ಲಿ ವಿದ್ಯಾರ್ಥಿಗಳ ಕಲರವವೂ ಕಂಡುಬಂತು. ಜಿಲ್ಲೆಯ ವಿವಿಧ ಕಾಲೇಜುಗಳ 250 ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್‌ನ ಮಕ್ಕಳು ಸ್ವಯಂಸೇವಕರಾಗಿ ಈ ಸಲ ಹುಂಡಿ ಎಣಿಕೆ ಮಾಡಿದ್ದು ಗಮನಸೆಳೆಯಿತು.
‘ವಿವಿಧ ಶಿಬಿರಗಳ ಭಾಗವಾಗಿ ನಾವು ಶ್ರಮದಾನ ಮಾಡುತ್ತಿದ್ದೆವು. ಆದರೆ, ಈ ಬಾರಿ ಯಲ್ಲಮ್ಮ ದೇವಸ್ಥಾನದಲ್ಲಿರುವ ಹುಂಡಿ ಎಣಿಕೆ ಮಾಡಿರುವುದು ಖುಷಿ ತಂದಿದೆ. ಈ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ’ ಎಂದು ಮೂಡಲಗಿ ಕಾಲೇಜಿನ ವಿದ್ಯಾರ್ಥಿ ಸಂಗಪ್ಪ ಕುಲಗೋಡ ಸಂತಸ ಹಂಚಿಕೊಂಡರು. ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಉಪ ಕಾರ್ಯಧರ್ಶಿ ನಾಗರತ್ನಾ ಚೋಳಿನ, ಶೀತಲ ಕಡಟ್ಟಿ, ಎ ಎಚ್ ಬ್ಯಾಹಟ್ಟಿ, ಅಲ್ಲಮಪ್ರಭು ಪ್ರಭುನವರ, ಆರ್ ಎಚ್ ಸವದತ್ತಿ, ಸಿ ಎನ್ ಕುಲಕರ್ಣಿ, ಎಸ್ ಡಿ ಕನವಿ, ಕೆನರಾ ಬ್ಯಾಂಕ್‌ನ ಮಲ್ಲಪ್ಪ ದರೂರ, ವಿಠಲ ಎಸ್ ಬಿ, ಬೆಳಗಾವಿಯ ದಾರ್ಮಿಧತ್ತಿ ಇಲಾಖೆ, ತಹಶೀಲ್ದಾರ ಇಲಾಖೆ, ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ದೇವಸ್ಥಾನ ಸಿಬ್ಬಂದಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 