ಗದಗ 14: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿಂದು ಡಾ.ಬಿ.ಆರ್. ಅಂಬೇಡ್ಕರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮಪರ್ಿಸಿದರು. ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ ಎನ್, ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೇಶಕ ಖಾಜಾ ಹುಸೇನ ಮುಧೋಳ, ಉಪಸ್ಥಿತರಿದ್ದರು.