ಡಾ. ಅಂಬೇಡ್ಕರ- ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ
Dr. Ambedkar- Babu Jagjivan Ram Jayanti Celebration
ಲಕ್ಷ್ಮೇಶ್ವರ 14: ಪಟ್ಟಣದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ, ಪುರಸಭೆ ಸಮಾಜ ಕಲ್ಯಾಣ ಇಲಾಖೆ ಶಿರಹಟ್ಟಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಲಕ್ಷ್ಮೇಶ್ವರ ತಾಲೂಕಿನ ವಿವಿಧ ಇಲಾಖೆಗಳ ಸಹಯೋಗದಲ್ಲಿ ಭಾರತ ರತ್ನ ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ್ ರವರ 119ನೇ ಜಯಂತ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಜಯಂತಿ ಅಂಗವಾಗಿ ಎರಡು ಮಹಾನ್ ನಾಯಕರ ಭಾವಚಿತ್ರ ಮೆರವಣಿಗೆ ನಡೆಯಿತು. . ಪಟ್ಟಣದ ಸೋಮೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡ ಮೆರವಣಿಗೆಯು ಅಂಬೇಡ್ಕರ್ ನಗರ ಪೋಸ್ಟ್ ಆಫೀಸ್ ಹೊಸ ಬಸ್ ನಿಲ್ದಾಣ ಶಿಗ್ಲಿನಾಕಾ ಪುರಸಭೆ ಹಾವಳಿ ಆಂಜನೇಯ ದೇವಸ್ಥಾನ ವಿದ್ಯಾರಣ್ಯ ಸರ್ಕಲ್ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳ ಮುಖಾಂತರ ಸಾಗಿ ಚೆನ್ನಮ್ಮನವರ ಕಲ್ಯಾಣ ಮಂಟಪ ತಲುಪಿ ವೇದಿಕೆಯ ಕಾರ್ಯಕ್ರಮ ನಡೆಯಿತು.
ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳಿಂದ ಮಹಾನ್ ನಾಯಕರ ಸಾಧನೆ ಅವರು ನೀಡಿ ಹೋದ ಕೊಡುಗೆಗಳನ್ನು ಹಾಡುತ್ತಾ ಸಾಗುತ್ತಿದ್ದರು. ಮೆರವಣಿಗೆಯಲ್ಲಿ ತಾಲೂಕು ಆಡಳಿತದ ಎಲ್ಲಾ ಇಲಾಖೆಯ ಅಧಿಕಾರಿಗಳು ದಲಿತ ಸಮುದಾಯದ ಮುಖಂಡರು ವಿವಿಧ ರಾಜಕೀಯ ಮುಖಂಡರು ಅಭಿಮಾನಿಗಳು ಪಾಲ್ಗೊಂಡಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 