ಡಾ.ಅಂಬೇಡ್ಕರ್ ಜಯಂತೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Dr. Ambedkar Jayanti and Award Ceremony

ತಾಳಿಕೋಟೆ 21: ತಾಲ್ಲೂಕಿನ ಕಲಕೇರಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಿ.ಜಿ.ಸಾಗರ ಬಣ) ವಲಯ ಶಾಖೆಯ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ 134ನೆಯ ಜಯಂತ್ಯುತ್ಸವ ಹಾಗೂ ಡಾ.ಅಂಬೇಡ್ಕರ್ ರಾಜ್ಯಪ್ರಶಸ್ತಿ ಪ್ರದಾನ ಸಮಾರಂಭವು ಇತ್ತೀಚೆಗೆ ನಡೆಯಿತು.  

ಇದರಂಗವಾಗಿ ಬೆಳಿಗ್ಗೆ ಡಾ.ಅಂಬೇಡ್ಕರ್ ವೃತ್ತದಲ್ಲಿ ಡಾ.ಅಂಬೇಡ್ಕರ್ ಅವರ ಮೂರ್ತಿಗೆ ಹಾಗೂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ಡಾ.ಅಂಬೇಡ್ಕರ್ ಅವರ ಭವ್ಯ ಭಾವಚಿತ್ರದ ಮೆರವಣಿಗೆಯು ಡಾ. ಅಂಬೇಡ್ಕರ್ ವೃತ್ತ ದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂಜೆ ಗ್ರಾಮದ ಮುಖ್ಯ ಬಜಾರ್ ನಲ್ಲಿರುವ ಡಾ. ಎಂ.ಎಂ. ಕಲಬುರ್ಗಿ ಮಹಾ ವೇದಿಕೆ ಮೇಲೆ ಬುದ್ಧ ಬಸವ ಅಂಬೇಡ್ಕರ್ ಅವರ ಬಾವಚಿತ್ರ ಪೂಜೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ವಿಜಯಪುರ ಅನುಗ್ರಹ ನೇತ್ರ ಆಸ್ಪತ್ರೆಯ ಮುಖ್ಯಸ್ಥ ಡಾ. ಪ್ರಭುಗೌಡ ಲಿಂಗದಳ್ಳಿ ಅವರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಹಿರಿಯ ಸಾಹಿತಿ ಪ್ರೊ.ಹೆಚ್‌.ಟಿ ಪೊ?ತೆ ಹಾಗೂ ತಾಳಿಕೋಟೆ ಎಸ್‌.ಕೆ.ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕಿ ಸುಜಾತಾ ಚಲವಾದಿ ಉಪನ್ಯಾಸ ನೀಡಿದರು. ಚನ್ನಪ್ಪ ಉತಾಳಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಾನ್ನಿಧ್ಯ ವಹಿಸಿದ್ದ ಕಲಬುರಗಿಯ ಧ್ಯಾನಭೂಮಿ ಬುದ್ಧವಿಹಾರ ಬೆಳಮಗಿಯ ಅಮರ ಜ್ಯೋತಿ ಹಾಗೂ ಗ್ರಾಮದ ಪಂಚರಂಗ ಗದ್ದಗಿಮಠದ ಮಡಿವಾಳೇಶ್ವರ ಶಿವಾಚಾರ್ಯರು, ವಲಯ ಸಂಚಾಲಕ ಸೋಮಶೇಖರ ಬಡಿಗೇರ, ಸ್ಥಳೀಯ ಗ್ರಾಮ ಪಂಚಾಯತಿ ಅಧ್ಯಕ್ಷ ರಾಜ ಅಹಮ್ಮದ ಶಿರಸಗಿ ಸೇರಿದಂತೆ ವಿವಿಧ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಗ್ರಾಮದ ಪ್ರಮುಖರು, ದಲಿತ ಮುಖಂಡರುಗಳು, ಸಂಗದ ಪದಾಧಿಕಾರಿಗಳು ಭಾಗವಹಿಸಿದ್ದರು.  

ಸಾಧಕರಿಗೆ ಡಾ. ಅಂಬೇಡ್ಕರ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಿಲ್ಲಾ ಸಂಚಾಲಕ ವೈ.ಸಿ. ಮಯೂರ ಸ್ವಾಗತಿಸಿ, ಪ್ರಾಸ್ತಾವಿಕ ನುಡಿದರು.