ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ
Dr. Anand. K assumed office as the new Vijayapur District Collector
ವಿಜಯಪುರ 09: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ 2016ರ ಬ್ಯಾಚ್ನ ಐಎಎಸ್ ಅಧಿಕಾರಿ ಡಾ.ಆನಂದ ಕೆ ಅವರು ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಜುಲೈ 9ರಂದು ಅಧಿಕಾರ ಸ್ವೀಕರಿಸಿದರು.
ವಿಜಯಪುರ ನಿರ್ಗಮಿತ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಬರ ಮಾಡಿಕೊಂಡು, ಹೂಗುಚ್ಛ ನೀಡಿ ಸ್ವಾಗತಿಸಿ, ಬುಧವಾರ ಅಧಿಕಾರ ಹಸ್ತಾಂತರಿಸಿದರು.
ಜನರಲ್ ಮೆಡಿಸಿನ್ ವಿಭಾಗದಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವೈದ್ಯಕೀಯ ಪದವಿ ಪಡೆದಿರುವ ಇವರು, ಕಳೆದ 2 ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದ ಡಾ.ಆನಂದ ಕೆ ಅವರು ವಿಜಯಪುರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆಯಾಗಿದ್ದಾರೆ.
ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ, ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ತದನಂತರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿಗಳಾಗಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಅಧಿಕಾರಿಗಳಾಗಿ ಹಾಗೂ ಜಿಲ್ಲೆಯ ಇಂಡಿ ಉಪ ವಿಭಾಗಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 