ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಪ್ರಕರಣಕ್ಕೆ ಡಾ, ಅನಿಲ್ ಕುಮಾರ್ ಬೇಗಾರ್ ಖಂಡನೆ
Dr. Anil Kumar Begar condemned for throwing shoes at judges
ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಪ್ರಕರಣಕ್ಕೆ ಡಾ, ಅನಿಲ್ ಕುಮಾರ್ ಬೇಗಾರ್ ಖಂಡನೆ
ಕೊಪ್ಪಳ 11: ಮುಖ್ಯ ನ್ಯಾಯಮೂರ್ತಿ ಗವಾಯಿ ಯವರ ಮೇಲೆ ರಾಕೇಶ್ ಕಿಶೋರ್ ಎಂಬುವರು ಮಾಡಿರುವ ಶೂ ಎಸೆತಕ್ಕೆ ಯತ್ನ ಪ್ರಕರಣವನ್ನು ಕೊಪ್ಪಳದ ಶ್ರೀ ನಾಗರತ್ನ ಶಿಕ್ಷಣ ಸೇವಾ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲೆಯ ಹಿರಿಯ ಸಮಾಜ ಸೇವಕ ಡಾ, ಅನಿಲ್ ಕುಮಾರ್ ಬೇಗಾರ್ ರವರು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿದ ಅವರು ಪ್ರಕರಣದ ಪ್ರಮುಖ ಆರೋಪಿ ರಾಕೇಶ್ ಕಿಶೋರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಆರೋಪಿಗಳನ್ನು ಬಂಧಿಸಿ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಸರ್ಕಾರಕ್ಕೆ ಮತ್ತು ರಾಷ್ಟ್ರಪತಿಯವರಿಗೆ ಪ್ರಕಟಣೆ ಮೂಲಕ ದೂರು ಸಲ್ಲಿಸಿ ಮನವಿ ಮಾಡಿಕೊಂಡು ಒತ್ತಾಯಿಸಿದ್ದಾರೆ, ಕೂಡಲೇ ಕಠಿಣ ಶಿಕ್ಷೆ ಒದಗಿಸಬೇಕು ಇಲ್ಲವಾದಲ್ಲಿ ರಾಜ್ಯದ್ಯಂತ ಉಗ್ರ ಹೋರಾಟ ಬೃಹತ್ ಪ್ರತಿಭಟನೆ ವಿವಿಧ ಪ್ರಗತಿಪರ ಸಂಘಟನೆಗಳ ಸಂಯೋಗದಲ್ಲಿ ನಡೆಸಲಾಗುವುದು ಎಂದು ಶ್ರೀ ನಾಗರತ್ನ ಶಿಕ್ಷಣ ಮತ್ತು ಸೇವಾ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಯಾಗಿರುವ ಹಾಗೂ ಕೊಪ್ಪಳ ಜಿಲ್ಲೆಯ ಹಿರಿಯ ಸಮಾಜ ಸೇವಕ ಡಾ, ಅನಿಲ್ ಕುಮಾರ್ ಬೇಗಾರ್ ರವರು ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 