ಕವಿವಿ ಬಿಒಎಸ್‌ಗೆ ಡಾ. ಅಪ್ಪಣ್ಣ ಹಂಜೆ ನೇಮಕ
Dr. Appanna Hanje appointed as Kavivi BOS
ಲೋಕದರ್ಶನ ವರದಿ
ಹುಲಕೋಟಿ 20: ಕರ್ನಾಟಕ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳ ಆದೇಶದಂತೆ ಕುಲಸಚಿವರು ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಅಪ್ಪಣ್ಣ ಹಂಜೆ ಅವರನ್ನು 2026-27 ಮತ್ತು 2027-28ರ ಸಾಲಿಗೆ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಷಯದ ಸ್ನಾತಕ ಅಭ್ಯಾಸ ಸೂಚಿ ಮಂಡಳಿಗೆ ವಿಷಯ ಪರಿಣಿತರಾಗಿ ನೇಮಕ ಮಾಡಿದ್ದಾರೆ. ಶ್ರೀಯುತರು ಕರ್ನಾಟಕದ ಇತಿಹಾಸ, ಧರ್ಮ, ಸಂಸ್ಕೃತಿ, ಸಾಹಿತ್ಯ, ಸಮಾಜ, ದೇವಾಲಯಗಳು, ಬಸದಿಗಳು, ಶಿಲ್ಪಗಳು, ಶಾಸನಗಳು, ಸ್ಮಾರಕಗಲ್ಲುಗಳು ಸೇರಿದಂತೆ ವಿಶೇಷವಾಗಿ ಜೈನ ಧರ್ಮದ ಸಾಂಸ್ಕೃತಿಕ ಆಯಾಮಗಳ ಕುರಿತು ತಲಸ್ಪರ್ಶಿ ಸಂಶೋಧನ ಅಧ್ಯಯನ ಕೈಗೊಂಡು ಮೌಲ್ಯಯುತ 15 ಕೃತಿಗಳು ಮತ್ತು 160ಕ್ಕೂ ಹೆಚ್ಚು ವಸ್ತುನಿಷ್ಠ ಲೇಖನಗಳನ್ನು ಪ್ರಕಟಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ಅಧ್ಯಯನ ವಿಭಾಗದ ಸಂಯೋಜಿತ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಹಾಮಾನಾ ಸಂಶೋಧನ ಕೇಂದ್ರದಲ್ಲಿ ಪಿಎಚ್.ಡಿ. ವಿದ್ಯಾರ್ಥಿಗಳಿಗೆ ಬಾಹ್ಯ ಮಾರ್ಗದರ್ಶಕರಾಗಿ ಹಾಗೂ ಕರ್ನಾಟಕ ಪುರಾತತ್ವ ಮತ್ತು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ ಶೈಕ್ಷಣಿಕ ಯೋಜನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮೂಲಕ ಶ್ರೀಯುತರು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಪ್ರಾಧ್ಯಾಪಕರು, ವಿದ್ಯಾರ್ಥಿಗಳ ಅಭಿನಂದನೆಗೆ ಪಾತ್ರರಾಗಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 