ಡಾ. ಅಶೋಕ ಹುಗ್ಗಣ್ಣವರ ಸ್ಮರಣೆ ಕಾರ್ಯಕ್ರಮ
Dr. Ashoka Huggannavar Memorial Program
ಹುಬ್ಬಳ್ಳಿ 31: ಖ್ಯಾತ ಹಿಂದೂಸ್ತಾನಿ ಗಾಯಕರಾದ ಡಾ. ಅಶೋಕ ರಾಮಪ್ಪ ಹುಗ್ಗಣ್ಣವರ ಅವರು ಲಿಂಗೈಕ್ಯರಾಗಿದ್ದಕ್ಕೆ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆ ಮಹಾನ್ ದಿವ್ಯಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ ಹಾಗೂ ಕಂಬನಿ ಮಿಡಿದಿದ್ದಾರೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದವರಾದ ಡಾ. ಹುಗ್ಗಣ್ಣವರ ಅವರು ಹೊನ್ನಾವರ ಎಂಪಿಇ ಸಂಸ್ಥೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಸಂಗೀತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ಡಾ. ಹುಗ್ಗಣ್ಣವರ ಅವರಿಗೆ ಅಪಾರ ಶಿಷ್ಯವರ್ಗವಿದೆ.
ಅವರ ಶಿಷ್ಯರು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ನವನಗರದ ಚಿಕ್ಕೇನಕೊಪ್ಪದ ಚನ್ನವೀರ ಶರಣರ ಅಂಧರ ಕಲ್ಯಾಣ ಆಶ್ರಮದಲ್ಲಿ ನಿನಾದ ಆರ್ಟ್ ಅಂಡ್ ಕಲ್ಚರಲ್ ಅಕಾಡೆಮಿಯು ಆಯೋಜಿಸಿದ್ದ ಡಾ. ಅಶೋಕ ಹುಗ್ಗಣ್ಣವರ ಸ್ಮರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ, ಪುಷ್ಾರೆ್ಪಣ ಮಾಡುವ ಮೂಲಕ ಗೌರವ ಅರೆ್ಣ ಮಾಡಿ, ನಮನಗಳನ್ನು ಸಲ್ಲಿಸಲಾಯಿತು. ನಿವೃತ್ತ ಪ್ರಾಚಾರ್ಯರಾದ ಪ್ರೊ ಎಸ್.ಕೆ. ಜಂಗ್ಲೆಪ್ಪಗೌಡ್ರ, ಪ್ರಭು ರೋಣದ್,ಬಿ. ಎಮ್ ದೊಡ್ಡಮನಿ, ಪ್ರೊ ಸಿ.ಎಮ್ ಮಠದ, ಮೃತ್ಯುಂಜಯ ಮಟ್ಟಿ, ವಿಜಯ್ ಕೋಟಿ, ವೀರೇಶ ಅಕ್ಕಿ ನಾರಾಯಣ ಭಾದ್ರಿ, ಶಂಕ್ರಯ್ಯ ಹಿರೇಮಠ, ವಿನಾಯಕ, ಗಣೇಶ, ಮುಂತಾದವರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 