ಡಾ.ಬಿ. ಆರ್‌. ಅಂಬೇಡ್ಕರ್ ಮಾನವ ರೂಪದಲ್ಲಿ ಜನ್ಮ ತಾಳಿದ ದೇವದೂತ: ನಾಡಗೌಡ

Dr. B. R. Ambedkar was an angel born in human form: Nadagowda

ಮುದ್ದೇಬಿಹಾಳ 07:    ಭಾರತ ರತ್ನ ಡಾ.ಭೀಮ್ ರಾವ್ ಅಂಬೇಡ್ಕರ್ ಅವರು ಭಾರತದ ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ, ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ ಮಾತ್ರವಲ್ಲದೇ ಮಾನವ ರೂಪದಲ್ಲಿ ಜನ್ಮ ತಾಳಿದ ನಿಜವಾದ ದೇವದೂತಾಗಿ ಧರೆಗಿಳಿದವರು ಎಂದರೆ ತಪ್ಪಾಗಲಾರದು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು   ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಹೇಳಿದರು. 

ಪಟ್ಟಣದ ಡಾ, ಅಂಬೇಡ್ಕರ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ, ಬಾಬಾಸಾಹೇಬ ಅಂಬೇಡ್ಕರವರ 68 ನೇ ಪರಿನಿರ್ವಣಾ ದಿನಾಚರಣೆ ಅಂಗವಾಗಿ ಅಂಬೇಡ್ಕರವರ ಪುತ್ಥಳಿಗೆ ಮಾಲಾರೆ​‍್ಣ ಮಾಡಿ ಅವರು ಮಾತನಾಡಿ ಸಂವಿದಾನ ಶಿಲ್ಪಿ  ಡಾ,  ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ಇಂದು ದೇಶಾದ್ಯಂತ ಕೋಟ್ಯಂತರ ಮಂದಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಬಾಬಾ ಸಾಹೇಬರು ಅಸಮಾನತೆಯೇ ಮೇಲೈಸುತ್ತಿದ್ದ ಕಾಲದಲ್ಲಿ ತಾನು ಅನುಭವಿಸಿದ ನೋವು, ಯಾತನೆಗಳು ಮುಂದಿನ ಜನಾಂಗಕ್ಕೆ ಅನ್ನುವ ದೃಷ್ಟಿಯಿಂದ ಸಿಗಬಾರದು ನಿರಂತರವಾಗಿ ಅಧ್ಯಯನ ಮಾಡಿ, ಅಸ್ಪೃಶ್ಯತೆ, ಅಸಮಾನತೆ, ತಾರತಮ್ಯದ ವಿರುದ್ಧ ಹೋರಾಡಿ, ಪ್ರತಿಯೊಬ್ಬರ ಹಕ್ಕುಗಳಿಗಾಗಿ ನ್ಯಾಯ ಮಂಡನೆ ಮಾಡಿದವರು. ಈ ನೆಲದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದರು. ಜೀವನಪರ್ಯಂತ ಅಭ್ಯುದಯಕ್ಕಾಗಿ ಚಿಂತಿಸಿದ ಮಹಾನ್ ವ್ಯಕ್ತಿಯ ನೆನೆದು ಅವರ ಆದರ್ಶ ಗುಣಗಳನ್ನು ಎಲ್ಲರೂಡಿಸಿಕೊಳ್ಳಬೇಕಿದೆ. ಯಾರೇ ಆಗಲಿ ಅಂತಹ ಮಹಾನ ನಾಯಕರ ಹೆಸರು ಬಳಿಸಿಕೊಂಡು ರಾಜಕಾರಣ ಮಾಡುವುದು ಸರಿಯಲ್ಲ ಅದನ್ನು ಬಲವಾಗಿ ಖಂಡಿಸುತ್ತೇನೆ ಎಂದರು. 

ಈ ವೇಳೆ ತಹಶಿಲ್ದಾರ ಬಲರಾಮ ಕಟ್ಟಿಮನಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸೈ ಸಂಜಯ ತಿಪ್ಪಾರೆಡ್ಡಿ, ದಲಿತ ಮುಖಂಡರಾದ ಹರೀಷ ನಾಟಿಕಾರ, ಡಿ ಬಿ ಮೂದೂರ, ಬಸವರಾಜ ಸಿದ್ದಾಪೂರ, ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ,  ತಾಲೂಕಾ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ, ವಾಯ್ ವಿಜಯಕರ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ತಿಪ್ಪಣ್ಣ ದೊಡಮನಿ, ಪ್ರಶಾಂತ ಕಾಳೆ, ಪ್ರಕಾಶ ಸರೂರ, ನ್ಯಾಯವಾದಿ ದೊಡಮನಿ, ಹಿರಿಯ ಪತ್ರಕರ್ತ. ಪರುಶುರಾಮ ಕೊಣ್ಣೂರ ಸೇರಿದಂತೆ ಹಲವರು ಇದ್ದರು