ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಸಮಾರಂಭ
Dr. B.R. Ambedkar's 135th birth anniversary celebration
ಬಳ್ಳಾರಿ 13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏ.14 ರಂದು ಮಧ್ಯಾಹ್ನ 12ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ಅವರ 135ನೇ ಜನ್ಮದಿನಾಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್‌ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ. ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷ್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಹೆಚ್. ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರರು ಭಾಗವಹಿಸುವರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 