ಡಾ. ಬಿ.ಆರ್. ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನ: ಪುಷ್ಪನಮನ ಸಲ್ಲಿಕೆ
Dr. B.R. Ambedkar's Maha Parinirvana Day: Offering of floral tributes
ಕೊಪ್ಪಳ 06 : ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಶನಿವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪುಷ್ಪ ನಮನ ಕಾರ್ಯಕ್ರಮ ಜರುಗಿತು.
ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಿಸಿದರು.
ಇದೇ ವೇಳೆ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಗಂಗಪ್ಪ ಸೊಗಲದ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರಾದ ಪುಷ್ಪಲತಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ್ ದೇಶಪಾಂಡೆ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಹನೀಯರ ಪುತ್ಥಳಿಗಳಿಗೆ ಮಾಲಾರೆ್ಣ: ಡಾ. ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮತ್ತು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಹಯೋಗದಲ್ಲಿ ನಗರದ ಹೊಸಪೇಟೆ ರಸ್ತೆಯ ಕಿಶೋರಿ ಪೆಟ್ರೋಲ್ ಬಂಕ್ ಹತ್ತಿರದ ಶಿವಶಾಂತವೀರ ನಗರದ ಅಂಬಿಗರ ಚೌಡಯ್ಯ ಉದ್ಯಾನವನದಲ್ಲಿರುವ ಮಹನೀಯರ (ಅಂಬೇಡ್ಕರ್, ಬಸವೇಶ್ವರ ಹಾಗೂ ಬಾಬು ಜಗಜೀವನ್‌ರಾಂ ರವರ) ಪುತ್ಥಳಿಗಳಿಗೆ ಮಾಲಾರೆ್ಣ ಹಾಗೂ ಕ್ಯಾಂಡಲ್ ಹಚ್ಚುವ ಮುಖೇನ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಗಂಗಪ್ಪ ಸೊಗಲದ ಸೇರಿದಂತೆ ಸಮಾಜ ಕಲ್ಯಾಣ ಮತ್ತು ವಿವಿಧ ಇಲಾಖೆಗಳ ಹಾಗೂ ನಗರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಇತರೆ ಜನಪ್ರತಿನಿಧಿಗಳು, ಸಮಾಜದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 